ಕರ್ನಾಟಕ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ದಿನೇಶ್ ಕುಮಾರ್
Thursday, February 1, 2024
ಕರ್ನಾಟಕ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ದಿನೇಶ್ ಕುಮಾರ್
ಫೆಬ್ರವರಿ 24, 2024ರಂದು ನಿವೃತ್ತರಾಗಲಿರುವ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಹೈಕೋರ್ಟ್ ನ್ಯಾಯಾಧೀಶರಾಗಿ ನ್ಯಾಯಾಂಗ ಮತ್ತು ಆಡಳಿತಾತ್ಮಕ ಭಾಗದಲ್ಲಿ ಸಾಕಷ್ಟು ಅನುಭವವನ್ನು ಹೊಂದಿರುವ ನ್ಯಾ. ದಿನೇಶ್ ಕುಮಾರ್, ಒಂದು ತಿಂಗಳಷ್ಟೇ ಅಧಿಕಾರಾವಧಿ ಹೊಂದಿದ್ದಾರೆ.
ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾ. ಪ್ರಸನ್ನ ಬಾಲಚಂದ್ರ ವರಾಳೆ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ದಿನೇಶ್ ಕುಮಾರ್ ಅವರ ಹೆಸರನ್ನು ಕೊಲೀಜಿಯಂ ಶಿಫಾರಸ್ಸು ಮಾಡಿದ್ದು, ಕೇಂದ್ರ ಸರ್ಕಾರ ಅನುಮೋದಿಸಿತ್ತು.
.