ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್ ವಿಭಾಗಿಯ ಪೀಠದ ಆದೇಶ ಅಮಾನ್ಯಗೊಳಿಸಿದ ಸುಪ್ರೀಂ ಕೋರ್ಟ್
ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್ ವಿಭಾಗಿಯ ಪೀಠದ ಆದೇಶ ಅಮಾನ್ಯಗೊಳಿಸಿದ ಸುಪ್ರೀಂ ಕೋರ್ಟ್
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿಸಿ ಹೈಕೋರ್ಟ್ ವಿಭಾಗಿಯ ಪೀಠ ನೀಡಿದ್ದ ಮಧ್ಯಂತರ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊರಡಿಸಿದ್ದ ಆದೇಶ ರದ್ದುಗೊಳಿಸಿದ್ದ ಏಕ ಸದಸ್ಯ ನ್ಯಾಯ ಪೀಠದ ಆದೇಶಕ್ಕೆ ಹೈಕೋರ್ಟ್ ನ ವಿಭಾಗಿಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು.
ಪರೀಕ್ಷೆ ಮುಂದೂಡಿಕೆ:
ಮಾರ್ಚ್ 13 ರಿಂದ 16 ರವರೆಗೆ ನಡೆಯಬೇಕಿದ್ದ 5 8 9ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಹೈಕೋರ್ಟ್ ವಿಭಾಗಿಯ ಪೀಠ ನೀಡಿದ ತಡೆಯಾದ್ಯಯನ್ನು ಸುಪ್ರೀಂಕೋರ್ಟ್ ರದ್ದುಪಡಿಸಿರುವ ಕಾರಣ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಜಂಟಿಯಾಗಿ ಮಾಹಿತಿ ನೀಡಿದೆ.
2023 24ನೇ ಸಾಲಿನ 5 8 ಹಾಗೂ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು ಎಸ್ಎ 2 ಮಾರ್ಚ್ 11 ರಿಂದ ಆರಂಭವಾಗಿದ್ದವು.
ಈಗಾಗಲೇ ಎರಡು ವಿಷಯಗಳ ಪರೀಕ್ಷೆ ಮುಗಿದಿವೆ ಐದನೇ ತರಗತಿಗೆ ಮಾರ್ಚ್ 14 ರವರೆಗೆ 8 ಹಾಗೂ 9ನೇ ತರಗತಿಗೆ ಮಾರ್ಚ್ 16ರ ವರೆಗೆ ಪರೀಕ್ಷೆ ನಡೆಸಬೇಕಿದೆ.