ರಾಜ್ಯ ಮಾನವ ಹಕ್ಕುಗಳ ಆಯೋಗ: ಹಂಗಾಮಿ ಅಧ್ಯಕ್ಷರಾಗಿ ಟಿ. ಶ್ಯಾಮ ಭಟ್ ನೇಮಕ
ರಾಜ್ಯ ಮಾನವ ಹಕ್ಕುಗಳ ಆಯೋಗ: ಹಂಗಾಮಿ ಅಧ್ಯಕ್ಷರಾಗಿ ಟಿ. ಶ್ಯಾಮ ಭಟ್ ನೇಮಕ
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (NHRC)ಗೆ ಹಂಗಾಮಿ ಅಧ್ಯಕ್ಷರಾಗಿ ಆಡಳಿತಾತ್ಮಕ ಸದಸ್ಯರಾಗಿರುವ ನಿವೃತ್ತ ಐಎಎಸ್ ಅಧಿಕಾರಿ ಡಾ. ಟಿ. ಶ್ಯಾಮ ಭಟ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (NHRC) ಅಧ್ಯಕ್ಷರಾಗಿ ನೇಮಕಗೊಂಡಿದ್ದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅವರನ್ನು ಲೋಕಪಾಲದ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಅಧ್ಯಕ್ಷ ಹುದ್ದೆಯನ್ನು ತೊರೆದಿದ್ದರು.
ಎಲ್. ನಾರಾಯಣಸ್ವಾಮಿ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಹುದ್ದೆಗೆ ಯಾರನ್ನೂ ನೇಮಕ ಮಾಡಲಾಗಿರಲಿಲ್ಲ. ಇದೀಗ ಈ ಖಾಲಿ ಇರುವ ಹುದ್ದೆಗೆ ಟಿ. ಶ್ಯಾಮ ಭಟ್ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯಪಾಲ ಶ್ರೀ ತಾವರ್ ಚಂದ್ ಗೆಹ್ಲೊಟ್ ಅವರು ಮಾನವ ಹಕ್ಕುಗಳ ರಕ್ಷಣಾ ಕಾಯ್ದೆಯ ಸೆಕ್ಷನ್ 25(1)ರ ಅಡಿಯಲ್ಲಿ ಪ್ರದತ್ತ ಅಧಿಕಾರ ಬಳಸಿ ಈ ನೇಮಕ ಮಾಡಿದ್ದಾರೆ. ಪೂರ್ಣಪ್ರಮಾಣದ ಅಧ್ಯಕ್ಷರ ನೇಮಕ ಮಾಡುವವರೆಗೆ ಶ್ಯಾಮ್ ಭಟ್ ಅಧಿಕಾರದಲ್ಲಿ ಇರುತ್ತಾರೆ.