ಕರ್ನಾಟಕ ಹೈಕೋರ್ಟ್‌ಗೆ ನ್ಯಾ. ವಲ್ಲೂರಿ ವರ್ಗಾವಣೆ: ಕೇಂದ್ರ ಸರ್ಕಾರದ ಆದೇಶ
Wednesday, May 29, 2024
ಕರ್ನಾಟಕ ಹೈಕೋರ್ಟ್‌ಗೆ ನ್ಯಾ. ವಲ್ಲೂರಿ ವರ್ಗಾವಣೆ: ಕೇಂದ್ರ ಸರ್ಕಾರದ ಆದೇಶ
ಕರ್ನಾಟಕ ಹೈಕೋರ್ಟ್‌ಗೆ ನ್ಯಾ. ವಲ್ಲೂರಿ ಕಾಮೇಶ್ವರ ರಾವ್ ಅವರನ್ನು ವರ್ಗಾವಣೆ ಮಾಡಿ ಕೇಂದ್ರ ಸರ್ಕಾರದ ಕಾನೂನು ಸಚಿವಾಲಯ ಆದೇಶ ಹೊರಡಿಸಿದೆ.
ನ್ಯಾ. ವಲ್ಲೂರಿ ಕಾಮೇಶ್ವರ ರಾವ್ ಅವರು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಸಂವಿಧಾನ ಪ್ರದತ್ತ ಅಧಿಕಾರ ಬಳಸಿ ನ್ಯಾ. ವಲ್ಲೂರಿ ಕಾಮೇಶ್ವರ ರಾವ್ ಅವರ ವರ್ಗಾವಣೆ ಆದೇಶಕ್ಕೆ ಸಹಿ ಹಾಕಿದ್ದರು. ಈ ಆದೇಶದ ಬೆನ್ನಲ್ಲೇ ಕೇಂದ್ರ ಸರ್ಕಾರ ವರ್ಗಾವಣೆ ಆದೇಶ ಹೊರಡಿಸಿದೆ.