ವಕೀಲರ ಸಂಘದಲ್ಲಿ ಶೇ. 33 ಮಹಿಳೆಯರಿಗೆ ಮೀಸಲಾತಿ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ
Saturday, May 4, 2024
ವಕೀಲರ ಸಂಘದಲ್ಲಿ ಶೇ. 33 ಮಹಿಳೆಯರಿಗೆ ಮೀಸಲಾತಿ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ
ಸುಪ್ರೀಂ ಕೋರ್ಟ್ ವಕೀಲರ ಸಂಘ (ಎಸ್‌ಸಿಬಿಎ) ಕಾರ್ಯಕಾರಿ ಸಮಿತಿಯಲ್ಲಿ ಕನಿಷ್ಟ ಮೂರನೇ ಒಂದರಷ್ಟು ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಸುಪ್ರೀಂ ಕೋರ್ಟ್‌ನ ನ್ಯಾ. ಸೂರ್ಯಕಾಂತ್ ಮತ್ತು ನ್ಯಾ. ಕೆ.ವಿ. ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ನ್ಯಾಯಪೀಠ ಈ ಮಹತ್ವದ ಆದೇಶ ಹೊರಡಿಸಿದೆ.
ಮೇ 16ರಂದು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ಗೆ ಚುನಾವಣೆ ಘೋಷಣೆಯಾಗಿದ್ದು, ಈ ಚುನಾವಣೆಗೆ ಎರಡು ವಾರಗಳು ಬಾಕಿ ಇರುವಾಗಲೇ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದೆ.
ಮುಂಬರುವ ಚುನಾವಣೆಯ ಖಜಾಂಚಿ, ಕಾರ್ಯಕಾರಿ ಸಮಿತಿಯ ಒಂಭತ್ತು ಹುದ್ದೆಗಳಲ್ಲಿ ಮೂರು ಮತ್ತು ಹಿರಿಯ ಕಾರ್ಯಕಾರಿ ಸಮಿತಿ 6 ಸದಸ್ಯರ ಪೈಕಿ ಎರಡು ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.