ಮೂರು ಪ್ರಮುಖ ಕಾಯ್ದೆ ಜುಲೈ 1ರಿಂದ ಅಧಿಕೃತವಾಗಿ ಜಾರಿಗೆ: ಕಾನೂನು ಸಚಿವಾಲಯ ಸ್ಪಷ್ಟನೆ
ಮೂರು ಪ್ರಮುಖ ಕಾಯ್ದೆ ಜುಲೈ 1ರಿಂದ ಅಧಿಕೃತವಾಗಿ ಜಾರಿಗೆ: ಕಾನೂನು ಸಚಿವಾಲಯ ಸ್ಪಷ್ಟನೆ
ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಜೂನ್ 30ಕ್ಕೆ ಇತಿಹಾಸದ ಪುಟಗಳನ್ನು ಸೇರಲಿದೆ.
ಅದರ ಬದಲಿಗೆ ಕ್ರಮವಾಗಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಅಸ್ತಿತ್ವಕ್ಕೆ ಬರಲಿದ್ದು, ಜುಲೈ 1ರಿಂದ ದೇಶಾದ್ಯಂತ ಜಾರಿಗೆ ಬರಲಿದೆ.
ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಅವರು ಕಾನೂನು ಸಚಿವರಿಗೆ ಪತ್ರ ಬರೆದು ಹೊಸ ಕಾನೂನುಗಳ ಬಗ್ಗೆ ಹಲವು ವಕೀಲರು ಮತ್ತು ಶಿಕ್ಷಣ ತಜ್ಞರು ಕಳವಳ ವ್ಯಕ್ತಪಡಿದ್ದಾಋಎ. ಹೀಗಾಗಿ ಅದನ್ನು ತಡೆ ಹಿಡಿಯಬೇಕು ಎಂದು ಮನವಿ ಮಾಡಿದ್ದರು.
ಆದರೆ, ಜೈಸಿಂಗ್ ಅವರ ಮನವಿಯನ್ನು ತಳ್ಳಿ ಹಾಕಿರುವ ಕಾನೂನು ಸಚಿವರು, ಹೊಸ ಕ್ರಿಮಿನಲ್ ಕಾನೂನುಗಳ ಮರುಪರಿಶೀಲನೆಗೆ ನಿರಾಕರಿಸಿದ್ದಾರೆ.
2024ರ ಫೆಬ್ರವರಿ 25ರಂದು ಅಧಿಸೂಚನೆ ಹೊರಡಿಸಿದ್ದ ಕೇಂದ್ರ ಸರ್ಕಾರ, ನೂತನ ಕಾನೂನುಗಳು ಈ ವರ್ಷದ ಜುಲೈ 1ರಿಂದ ಜಾರಿಗೆ ಬರಲಿವೆ ಎಂದು ಘೋಷಣೆ ಮಾಡಿತ್ತು.