ಪ್ರಜ್ವಲ್ ಪ್ರಕರಣದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕಿ ಜಯ್ನಾ ಕೊಥಾರಿ ರಾಜೀನಾಮೆ: ಅವರು ಕೊಟ್ಟ ಕಾರಣ ಗೊತ್ತೇ..?
ಪ್ರಜ್ವಲ್ ಪ್ರಕರಣದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕಿ ಜಯ್ನಾ ಕೊಥಾರಿ ರಾಜೀನಾಮೆ: ಅವರು ಕೊಟ್ಟ ಕಾರಣ ಗೊತ್ತೇ..?
ಜಯ್ನಾ ಕೊಥಾರಿ ಅವರು ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ಅವರನ್ನು ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಮತ್ತು ಈ ಸಂಬಂಧ ವಿಶೇಷ ತನಿಖಾ ದಳ (SIT) ನಡೆಸುತ್ತಿರುವ ಪ್ರಕರಣಗಳಲ್ಲಿ ಸರ್ಕಾರದ ಪರ ವಾದಿಸಲು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಕ ಮಾಡಲಾಗಿತ್ತು.
ಆದರೆ, ಎಲ್ಲರಿಗೂ ಅಚ್ಚರಿ ಮೂಡಿಸುವಂತೆ ಜಯ್ನಾ ಕೊಥಾರಿ ಅವರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ದಿನಾಂಕ 11-06-2024ರಂದು ಅವರು ಗೃಹ ಸಚಿವಾಲಯದ ಉಪ ಕಾರ್ಯದರ್ಶಿಯವರಿಗೆ ಬರೆದ ಪತ್ರದಲ್ಲಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದು, ಇದನ್ನು ಅಂಗೀಕರಿಸುವಂತೆ ಕೋರಿದ್ದಾರೆ.
ಆದರೆ, ಅವರು ತಮ್ಮ ರಾಜೀನಾಮೆಗೆ ಯಾವುದೇ ನಿರ್ದಿಷ್ಟ ಕಾರಣಗಳನ್ನು ತಿಳಿಸಿಲ್ಲ.
ವಕೀಲರಾದ ಬಿ.ಎನ್. ಜಗದೀಶ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಿಸಲಾಗಿತ್ತು. ಆ ಬಳಿಕ, ಪ್ರಜ್ವಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ವಾದ ಮಂಡಿಸಲು ಪ್ರೊ. ರವಿವರ್ಮಾ ಕುಮಾರ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ರಾಜ್ಯ ಸರ್ಕಾರ ನೇಮಿಸಿತ್ತು.