-->
ರಾತ್ರಿ ಇಡೀ ವಿಚಾರಣೆ: ವಯೋವೃದ್ಧ ಉದ್ಯಮಿಗೆ ರಾತ್ರಿ ಪೂರ್ತಿ ಡ್ರಿಲ್ ಮಾಡಿ ಮುಂಜಾನೆ ಬಂಧನ- ಇಡಿ ವಿರುದ್ಧ ಸುಪ್ರೀಂ ಕೋರ್ಟ್ ಕೆಂಡಾಮಂಡಲ!

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಂಜಾನೆ 3 ಗಂಟೆಯ ವರೆಗೂ ವಿಚಾರಣೆ ನಡೆಸಿದ ಕ್ರಮವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಸುಪ್ರೀಂ ಕೋರ್ಟ್‌ನ ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾ. ಕೆ.ವಿ. ವಿಶ್ವನಾಥನ್ ಅವರಿದ್ದ ನ್ಯಾಯಪೀಠ ಈ ಆಕ್ಷೇಪ ವ್ಯಕ್ತಪಡಿಸಿದೆ.

ಮುಂಜಾನೆ ವರೆಗೂ ವಿಚಾರಣೆ ಮಾಡಿದ ಕ್ರಮ ಸರಿಯಲ್ಲ. ನಾವು ಆರೋಪಿಯ ವಿರುದ್ಧ ಮಾಡಲಾದ ಆರೋಪಗಳ ವಿಶ್ವಾಸಾರ್ಹತೆ ಮತ್ತು ವಿಚಾರಣಾರ್ಹತೆ ಬಗ್ಗೆ ಮಾತನಾಡುತ್ತಿಲ್ಲ. ಆದರೆ, ವಿಸ್ತೃತವಾದ ಕಾಳಜಿಯೊಂದಿಗೆ ಈ ವಿಚಾರ ಪ್ರಸ್ತಾಪಿಸುತ್ತಿದ್ದೇವೆ ಎಂದು ಇಡಿ ಅಧಿಕಾರಿಗಳಿಗೆ ನ್ಯಾಯಪೀಠ ಪಾಠ ಮಾಡಿತು.

64 ವರ್ಷದ ಉದ್ಯಮಿಯೊಬ್ಬರು ಸಲ್ಲಿಸಿದ್ದ ಮನವಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಪೀಠ ಈ ಆಕ್ಷೇಪಾರ್ಹ ಮಾತುಗಳನ್ನಾಡಿತ್ತು. ಪ್ರಕರಣದಲ್ಲಿ ಆರೋಪಿ ಉದ್ಯಮಿಯನ್ನು ರಾತ್ರಿ ಇಡೀ ವಿಚಾರಣೆ ನಡೆಸಿದ ಬೆಳಿಗ್ಗಿನ ಜಾವ ಬಂಧಿಸಲಾಗಿತ್ತು.

ಉದ್ಯಮಿ ರಾಮ್ ಇಸ್ರಾನಿ ಅವರು ತಮ್ಮ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ಪರಿಹಾರಕ್ಕಾಗಿ ಉದ್ಯಮಿ ಇಸ್ರಾನಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ರಾಮ್ ಇಸ್ರಾನಿ ಅವರನ್ನು ಬಂಧಿಸಲಾಗಿತ್ತು.

Ads on article

Advertise in articles 1

advertising articles 2

Advertise under the article