ವಿಧಾನಮಂಡಲ ಅಧಿವೇಶನದಲ್ಲಿ ನೀಟ್ ವಿರೋಧಿಸಿ ನಿರ್ಣಯ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಹೊಸ ವ್ಯವಸ್ಥೆಗೆ ನಾಂದಿ?
ವಿಧಾನಮಂಡಲ ಅಧಿವೇಶನದಲ್ಲಿ ನೀಟ್ ವಿರೋಧಿಸಿ ನಿರ್ಣಯ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಹೊಸ ವ್ಯವಸ್ಥೆಗೆ ನಾಂದಿ?
ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಹೊಸ ವ್ಯವಸ್ಥೆಗೆ ನಾಂದಿ ಹಾಡುವ ನಿಟ್ಟಿನಲ್ಲಿ ಪ್ರಸಕ್ತ ವಿಧಾನಮಂಡಲ ಅಧಿವೇಶನದಲ್ಲಿ ನೀಟ್ ವಿರೋಧಿಸಿ ನಿರ್ಣಯ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET)ಗೆ ರಾಜ್ಯ ಸರ್ಕಾರ ತಿರುಗೇಟು ನೀಡಲು ಸಿದ್ಧತೆ ನಡೆಸಿದ್ದು, ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲು ಮುಂದಾಗಿದೆ.
ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ. ಇದನ್ನು ತಡೆಯಲು ರಾಜ್ಯ ಸರ್ಕಾರವೇ ಪರೀಕ್ಷೆ ನಡೆಸಲು ಸಿದ್ಧವಿದೆ ಎಂದು ಸಂಪುಟ ಸಭೆಯ ಬಳಿಕ ಮಾಹಿತಿ ಹೊರಬಿದ್ದಿದೆ.
ಕೇಂದ್ರ ಸರ್ಕಾರದ 'ಒಂದು ದೇಶ. ಒಂದು ಚುನಾವಣೆ' ಪರಿಕಲ್ಪನೆ ಮತ್ತು ಜನಸಂಖ್ಯೆ ಆಧಾರದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಪುನರ್‌ವಿಂಗಡನೆ ಪ್ರಕ್ರಿಯೆಯನ್ನು ವಿರೋಧಿಸಿ ಅಧಿವೇಶನದಲ್ಲಿ ಮತ್ತೊಂದು ನಿರ್ಣಯವನ್ನು ಅಂಗೀಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.