ಶೀಘ್ರದಲ್ಲೇ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್: ಹೊಸ ನಿಯಮದಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ..
ಶೀಘ್ರದಲ್ಲೇ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್: ಹೊಸ ನಿಯಮದಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ..
ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಶೀಘ್ರದಲ್ಲೇ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ಬರಲಿದೆ. ಈ ಬಗ್ಗೆ ಆಡಳಿತಾತ್ಮಕ ವ್ಯವಸ್ಥೆ ಸಿದ್ಧಗೊಳಿಸಲು ಇಲಾಖೆ ಮುಂದಾಗಿದೆ.
ರಾಜ್ಯದ ಎಲ್ಲ ಇಲಾಖೆಗಳ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಯಂತ್ರದ ಪ್ರತಿಷ್ಠಾಪಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳಿಂದ ಮಾಹಿತಿ ಕೇಳಲಾಗಿದೆ.
ಬಹುತೇಕ ಎಲ್ಲ ಇಲಾಖೆಗಳಿಂದಲೂ ಬಯೋಮೆಟ್ರಿಕ್ ಅಳವಡಿಸುವ ಕುರಿತು ವರದಿಯನ್ನು ಮುಖ್ಯಾಧಿಕಾರಿಗಳ ಮೂಲಕ ಸಂಬಂಧಪಟ್ಟ ಇಲಾಖೆಗೆ ಕಳುಹಿಸಿಕೊಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಈ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಕಚೇರಿಗಳಲ್ಲಿ ಶೀಘ್ರದಲ್ಲೇ ಈ ವ್ಯವಸ್ಥೆ ಜಾರಿ ಬರಲಿದೆ.
ಸರ್ಕಾರಿ ನೌಕರರು ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ಎಂಬ ನಿಯಮ ಜಾರಿಗೆ ಬರಲಿದ್ದು, ವಿಳಂಬವಾಗಿ ಬರುವ ಇಲ್ಲವೇ ಅವಧಿಗೆ ಮುನ್ನ ಕಚೇರಿ ತೊರೆಯುವ ಸರ್ಕಾರಿ ನೌಕರರು ಸಂಕಷ್ಟಕ್ಕೊಳಗಾಗಲಿದ್ದಾರೆ.