ಹೆರಿಗೆ ಸವಲತ್ತು ನೀಡದ ಕಾನೂನು ಸೇವೆಗಳ ಪ್ರಾಧಿಕಾರ: ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಹೆರಿಗೆ ಸವಲತ್ತು ನೀಡದ ಕಾನೂನು ಸೇವೆಗಳ ಪ್ರಾಧಿಕಾರ: ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್
ದೆಹಲಿ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಸೇವೆ ಸಲ್ಲಿಸುತ್ತಿರುವ ಕಾನೂನು ನೆರವು ವಕೀಲರಿಗೆ ಹೆರಿಗೆ ಸವಲತ್ತು ನೀಡದ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಸುಪ್ರೀಂ ಕೋರ್ಟ್‌ನ ನ್ಯಾ. ಬೇಲಾ ಎಂ. ತ್ರಿವೇದಿ ಮತ್ತು ನ್ಯಾ. ಸತೀಶ್ ಚಂದ್ರ ಶರ್ಮಾ ಅವರಿದ್ದ ವಿಭಾಗೀಯ ನ್ಯಾಯಪೀಠ ಅರ್ಜಿಯನ್ನು ತಿರಸ್ಕರಿಸಿದ್ದರು, ದೆಹಲಿ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದ ತೀರ್ಪನ್ನು ಎತ್ತಿಹಿಡಿದಿದೆ.
ಹೆರಿಗೆ ಸೌಲಭ್ಯ ಕಾಯ್ದೆಯು ಉದ್ಯೋಗದ ಸ್ವರೂಪವನ್ನು ಆಧರಿಸಿ ತಾರತಮ್ಯ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಏಕಸದಸ್ಯ ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ ರದ್ದುಪಡಿಸಿತ್ತು. ಈ ಆದೇಶದ ವಿರುದ್ಧ ಬಾಧಿತೆ ವಕೀಲರಾದ ಅನ್ವೇಷಾ ದೇಬ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಕಾನೂನು ಸೇವಾ ಪ್ರಾಧಿಕಾರದೊಂದಿಗೆ ತೊಡಗಿಕೊಂಡಿರುವ ವಕೀಲರು ಉದ್ಯೋಗಿ ಅಲ್ಲ. ಹಾಗಾಗಿ ಅವರು ಹೆರಿಗೆ ಸೌಲಭ್ಯಗಳ ಕಾಯ್ದೆ 1961ರ ಅಡಿಯಲ್ಲಿ ಹೆರಿಗೆ ಸವಲತ್ತು ಪಡೆಯಲು ಅರ್ಹರಲ್ಲ ಎಂದು ದೆಹಲಿ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಕಳೆದ ಎಪ್ರಿಲ್‌ನಲ್ಲಿ ತೀರ್ಪು ನೀಡಿತ್ತು.
ವಕೀಲರಾದ ಅನ್ವೇಷಾ ದೇಬ್ ಅವರಿಗೆ ವೈದ್ಯಕೀಯ, ಹಣಕಾಸು ನೆರವು ಹಾಗೂ ಇತರ ಸೌಲಭ್ಯಗಳನ್ನು ಒದಗಿಸುವಂತೆ ದೆಹಲಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನೀಡಿದ್ದ ತೀರ್ಪನ್ನು ಅದು ರದ್ದುಪಡಿಸಿತ್ತು.
ಪ್ರಕರಣ: ಅನ್ವೇಷಾ ದೇಬ್ Vs ದೆಹಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಸುಪ್ರೀಂ ಕೋರ್ಟ್)