-->
ಜಡ್ಜ್‌ರಿಗೆ ಸ್ಥಳೀಯ ಭಾಷೆಯ ಜ್ಞಾನ ಅಗತ್ಯ, ಸಾಕ್ಷಿಗಳ ಜೊತೆ ಅದೇ ಭಾಷೆಯಲ್ಲಿ ವ್ಯವಹರಿಸುವ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ನ್ಯಾಯಾಂಗ ಅಧಿಕಾರಿಗಳು ಅಥವಾ ನ್ಯಾಯಾಧೀಶರಿಗೆ ಸ್ಥಳೀಯ ಭಾಷೆಯ ಜ್ಞಾನ ಅತಿ ಅಗತ್ಯ. ಪ್ರಕರಣದ ವಿಚಾರಣೆ ವೇಳೆ ನ್ಯಾಯಾಧೀಶರು ಸಾಕ್ಷಿಗಳ ಜೊತೆ ಅದೇ ಭಾಷೆಯಲ್ಲಿ ವ್ಯವಹರಿಸುವ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾ. ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ತ್ರಿಸದಸ್ಯ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದೆ.

ನ್ಯಾಯಾಂಗ ಅಧಿಕಾರಿಗಳು ಸಮರ್ಪಕವಾಗಿ ನ್ಯಾಯತೀರ್ಮಾನ ಮಾಡಬೇಕಾದರೆ ಅವರು ನೇಮಕಗೊಂಡಿರುವ ಯಾ ಕೆಲಸ ಮಾಡುವ ಪ್ರಾಂತ್ಯದ ಸ್ಥಳೀಯ ಭಾಷೆಯನ್ನು ತಿಳಿದಿರಬೇಕು ಎಂದು ನ್ಯಾಯಪೀಠ ಹೇಳಿದೆ.

ನ್ಯಾಯಾಂಗ ಅಧಿಕಾರಿಗಳು ಸ್ಥಳೀಯ ಭಾಷೆಗಳಲ್ಲಿ ಸಾಕ್ಷಿಗಳು ಹಾಗೂ ಸಾಕ್ಷ್ಯಗಳ ಜೊತೆಗೆ ವ್ಯವಹರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಅವರಿಗೆ ಸ್ಥಳೀಯ ಭಾಷೆಯ ಜ್ಞಾನ ಅಗತ್ಯವಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಪ್ರಕರಣ: ಕಾನೂನು ವಕೀಲರು Vs ಬ್ಯಾರಿಸ್ಟರ್ ಕಾನೂನು ಸಂಸ್ಥೆ (ಸುಪ್ರೀಂ ಕೋರ್ಟ್‌)

Ads on article

Advertise in articles 1

advertising articles 2

Advertise under the article