-->
ವಿದ್ಯಾರ್ಥಿನಿ ಆತ್ಮಹತ್ಯೆಗೆ ಪ್ರಚೋದನೆ: ಶಿಕ್ಷಕರಿಬ್ಬರ ವಿರುದ್ಧದ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಕಾರ

ವಿದ್ಯಾರ್ಥಿನಿ ಆತ್ಮಹತ್ಯೆಗೆ ಪ್ರಚೋದನೆ: ಶಿಕ್ಷಕರಿಬ್ಬರ ವಿರುದ್ಧದ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಕಾರ

ವಿದ್ಯಾರ್ಥಿನಿ ಆತ್ಮಹತ್ಯೆಗೆ ಪ್ರಚೋದನೆ: ಶಿಕ್ಷಕರಿಬ್ಬರ ವಿರುದ್ಧದ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಕಾರ





ಶಿಕ್ಷಣದಲ್ಲಿ ಶಿಸ್ತು ಮುಖ್ಯ. ಆದರೆ, ಶಿಸ್ತಿನ ಹೆಸರಿನಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಜೀವಕ್ಕೆ ಹಾನಿಯಾಗುವಂತೆ ನೋಡಿಕೊಳ್ಳಬಾರದು ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.


ಧರ್ಮಸ್ಥಳದ ಎಸ್‌ಡಿಎಂ ಪ್ರೌಢ ಶಾಲೆಯ ಶಿಕ್ಷಕರಾದ ರೂಪೇಶ್ ಮತ್ತು ಸದಾನಂದ ಅವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.


ವಿದ್ಯಾರ್ಥಿನಿಯೊಬ್ಬರಿಗೆ ಬೆದರಿಕೆ ಹಾಕಿ ಆಕೆಯ ಆತ್ಮಹತ್ಯೆಗೆ ಕಾರಣವಾದ ಆರೋಪ ಹೊತ್ತ ಧರ್ಮಸ್ಥಳದ ಎಸ್‌ಡಿಎಂ ಪ್ರೌಢ ಶಾಲೆಯ ಶಿಕ್ಷಕರಾದ ರೂಪೇಶ್ ಮತ್ತು ಸದಾನಂದ ಅವರು ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಕೋರಿ ಅರ್ಜಿ ಸಲ್ಲಿಸಿದ್ದರು.


ಇದರ ವಿಚಾರಣೆ ನಡೆಸಿದ ನ್ಯಾಯಪೀಠ, ಶಿಕ್ಷಕರಿಬ್ಬರ ವಿರುದ್ಧ ದಾಖಲಾದ ಎಫ್‌ಐಆರ್ ರದ್ದುಪಡಿಸಲು ನಿರಾಕರಿಸಿದೆ.


ಶಿಕ್ಷಕ ಸದಾನಂದ, ನೀನು ಯುವಕನನ್ನು ಚುಂಬಿಸುತ್ತಿರುವ ವೀಡಿಯೋ ನನ್ನ ಬಳಿ ಇದೆ. ಅದನ್ನು ಎಲ್ಲರಿಗೂ ತಿಳಿಯುವಂತೆ ಪ್ರಸಾರ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾಗಿ ಮೃತ ವಿದ್ಯಾರ್ಥಿನಿ ಮರಣಪೂರ್ವ ಹೇಳಿಕೆ ನೀಡಿದ್ದಾರೆ. ಇದನ್ನು ಗಮನಿಸಿದಾಗ, ಮಕ್ಕಳ ವಿಚಾರದಲ್ಲಿ ಶಿಕ್ಷಕರು ಹೊಂದಿರುವ ಸಂಕುಚಿತ ದೃಷ್ಟಿಕೋನದ ಬಗ್ಗೆ ಆತಂಕ ಮೂಡುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.


ಪ್ರಕರಣದ ವಿವರ:

10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಬಾಲಕಿ ಯುವಕನ ಜೊತೆಗೆ ಆತ್ಮೀಯವಾಗಿದ್ದರು. ಇದನ್ನು ಗಮನಿಸಿದ ಶಿಕ್ಷಕರು ವಿದ್ಯಾರ್ಥಿನಿಯ ತಾಯಿಯ ಗಮನಕ್ಕೆ ತಂದಿದ್ದರು. ಈ ಬಗ್ಗೆ ಶಾಲೆಗೆ ತೆರಳಿದ್ದ ವಿದ್ಯಾರ್ಥಿನಿಯ ತಾಯಿ, ನನ್ನ ಮಗಳ ಬಗ್ಗೆ ಏನೇ ಆರೋಪ ಇದ್ದರೂ ಅದನ್ನು ಇತರ ಮಕ್ಕಳ ಮುಂದೆ ಬಹಿರಂಗಪಡಿಸಿ ಅವಮಾನಿಸದೆ ನನ್ನ ಗಮನಕ್ಕೆ ತನ್ನಿ ಎಂದು ಹೇಳಿದ್ದರು.


ಈ ಘಟನೆಯ ನಂತರವೂ ಆ ವಿದ್ಯಾರ್ಥಿನಿ ಯುವಕನ ಜೊತೆಗೆ ಮಾತನಾಡುವುದನ್ನು ಮುಂದುವರಿಸಿದ್ದಳು. ಈ ವಿಚಾರವನ್ನು ಶಿಕ್ಷಕ ರೂಪೇಶ್ ಇತರ ವಿದ್ಯಾರ್ಥಿಗಳಿಗೆ ತಿಳಿಸಿದ್ದರು. ಇದಾದ ನಂತರ, ಬಾಲಕಿ ವಿ‍ಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು.


ಈ ಬಗ್ಗೆ ದೂರು ದಾಖಲಿಸಿಕೊಂಡ ಧರ್ಮಸ್ಥಳ ಪೊಲೀಸರು, ಆರೋಪಿಗಳ ವಿರುದ್ಧ ಐಪಿಸಿ 305, 354D, 506, 509 ಮತ್ತು 34ರ ಕಲಂ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ- 2012(ಪೋಕ್ಸೋ) ಹಾಗೂ ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಡಿ ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.




Ads on article

Advertise in articles 1

advertising articles 2

Advertise under the article