-->
ಸಹಕಾರ ಸಂಘಗಳ ಕಾಯಿದೆ ತಿದ್ದುಪಡಿ ಸಂವಿಧಾನಬಾಹಿರ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಸಹಕಾರ ಸಂಘಗಳ ಕಾಯಿದೆ ತಿದ್ದುಪಡಿ ಸಂವಿಧಾನಬಾಹಿರ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಸಹಕಾರ ಸಂಘಗಳ ಕಾಯಿದೆ ತಿದ್ದುಪಡಿ ಸಂವಿಧಾನಬಾಹಿರ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು







ಸಹಕಾರ ಸಂಘಗಳ ನೇಮಕಾತಿ ಮತ್ತು ವರ್ಗಾವಣೆಗೆ ಸಂಬಂಧಿಸಿದಂತೆ ಸಹಕಾರ ಸಂಘಗಳ ಕಾಯಿದೆಯ ಸೆಕ್ಷನ್ 128(a)ಗೆ ತಿದ್ದುಪಡಿ ಮಾಡಿರುವುದು ಸಂವಿಧಾನ ಬಾಹಿರವಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.


ಕರ್ನಾಟಕ ಹೈಕೋರ್ಟ್‌ನ ನ್ಯಾ. ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.


ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಕಾಯಿದೆ-2023ರ ಯ ಸೆಕ್ಷನ್ 128(a)ಗೆ ತಿದ್ದುಪಡಿ ಮಾಡಿದ್ದ ಸರ್ಕಾರ, ಸಹಕಾರ ಸಂಘಗಳ ಸಿಬ್ಬಂದಿ ನೇಮಕ ಮತ್ತು ವರ್ಗಾವಣೆ ಅಧಿಕಾರವನ್ನು ಕಿತ್ತುಕೊಂಡಿತ್ತು. ಈ ಆದೇಶದ ವಿರುದ್ಧ ದಕ್ಷಿಣ ಕನ್ನಡದ ಉಪ್ಪಿನಂಗಡಿ ಕೃಷಿ ಸಹಕಾರ ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ನ್ಯಾಯಪೀಠ ಈ ತೀರ್ಪು ನೀಡಿದೆ.


ಜನರೇ ಸಹಕಾರ ಚಳವಳಿಯ ಜೀವಾಳ. ಜನರಿಗಾಗಿ ರಚಿಸಿಕೊಂಡಿರುವ ಸಂಘಗಳೇ ಸಹಕಾರ ಸಂಘಗಳು. ಇದರಲ್ಲಿ ಸರ್ಕಾರ ಸೇರಿದಂತೆ ಮೂರನೇ ವ್ಯಕ್ತಿಯ ಹಸ್ತಕ್ಷೇಪಕ್ಕೆ ಅವಕಾಶ ಇಲ್ಲ. ಹಾಗೊಂದು ವೇಳೆ ಈ ರೀತಿ ಮಧ್ಯಪ್ರವೇಶ ಮಾಡಿದರೆ ಆಗ ಅದು ಸಂವಿಧಾನದ ಕಲಂ 19(c)ಯ ಉಲ್ಲಂಘನೆ ಆಗುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.





ಸಿಬ್ಬಂದಿ ನೇಮಕ ಮತ್ತು ವರ್ಗಾವಣೆಯಲ್ಲಿ ಸಹಕಾರ ಸಂಘಗಳಿಗೆ ಇರುವ ಅಧಿಕಾರವನ್ನು ಸರ್ಕಾರ ತೆಗೆದುಕೊಂಡರೆ ಆಗ ಅದು ರಾಜಕೀಯಕ್ಕೆ ಕಾರಣವಾಗುತ್ತದೆ. ಇದು ಸಹಕಾರ ಸಂಘಗಳ ಕಾರ್ಯನಿರ್ವಣೆಯ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ತಿದ್ದುಪಡಿ ರದ್ದುಗೊಳಿಸಬೇಕು ಮತ್ತು ಸಿಬ್ಬಂದಿ ನೇಮಕದ ಮೇಲಿನ ಸ್ವಾತಂತ್ಯವನ್ನು ಆಯಾ ಸಂಘಗಳಿಗೆ ಬಿಟ್ಟುಕೊಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.


ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಸಹಕಾರ ಸಂಘಗಳ ನೇಮಕಾತಿ ವೃಂದ ರಚನೆ, ನೇಮಕಾತಿ, ನೌಕರರ ವರ್ಗಾವಣೆ ಮತ್ತು ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರವನ್ನು ಸಹಕಾರ ಸಂಘಗಳಿಂದ ಮೊಟಕುಗೊಳಿಸಿ ರಾಜ್ಯ ಸರ್ಕಾರ ತಿದ್ದುಪಡಿ ತಂದಿರುವುದು ಸಂವಿಧಾನ ಬಾಹಿರ ಎಂದು ಮಹತ್ವದ ತೀರ್ಪು ನೀಡಿದೆ.


ಪ್ರಕರಣದ ವಿವರ: ಉಪ್ಪಿನಂಗಡಿ ಕೋ ಅಪರೇಟಿವ್ ಅಗ್ರಿಕಲ್ಚರಲ್ ಸೊಸೈಟಿ Vs ಕರ್ನಾಟಕ ಸರ್ಕಾರ ಮತ್ತಿತರರು

ಕರ್ನಾಟಕ ಹೈಕೋರ್ಟ್‌, WP 26102/2023 Dated 08-08-2024




Ads on article

Advertise in articles 1

advertising articles 2

Advertise under the article