-->
ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ: ಆರೋಪಿ ವೈದ್ಯರ ಪ್ರಕರಣ ಕೈಬಿಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್‌

ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ: ಆರೋಪಿ ವೈದ್ಯರ ಪ್ರಕರಣ ಕೈಬಿಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್‌

ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ: ಆರೋಪಿ ವೈದ್ಯರ ಪ್ರಕರಣ ಕೈಬಿಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್‌




ವೈದ್ಯರಿಗೆ ಲೈಂಗಿಕ ಕಿರುಕುಳ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪಿ ವೈದ್ಯನ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌  ನಿರಾಕರಿಸಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.

ಕುಂದಾಪುರದ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್‌ ರೆಬೆಲ್ಲೋ ಅವರು ತಮ್ಮ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಯ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ, ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡುವ ಆರೋಪ ಗಂಭೀರವಾಗಿದ್ದು, ಅಂತಹ ಆರೋಪಿ ವೈದ್ಯರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಪ್ರಕರಣದ ಸಂಬಂಧ ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಲಿ. ಆ ಬಳಿಕ ಆರೋಪಿ ವೈದ್ಯರು ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಪೀಠ ಸೂಚಿಸಿದ ಹಿನ್ನೆಲೆಯಲ್ಲಿ ಅರ್ಜಿದಾರರು ತಮ್ಮ ಅರ್ಜಿಯನ್ನು ವಾಪಸ್ ಪಡೆದುಕೊಂಡರು.

ಮೇಲ್ನೋಟಕ್ಕೆ ದಾಖಲೆಗಳನ್ನು ಪರಿಶೀಲಿಸಿದರೆ, ಅರ್ಜಿದಾರ ವೈದ್ಯೆ ದೂರುದಾರ ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ ನೀಡಿರುವುದು ಕಂಡುಬರುತ್ತಿದೆ. ಈ ಹಂತದಲ್ಲಿ ಎಫ್‌ಐಆರ್‌ನ್ನು ರದ್ದುಪಡಿಸಲಾಗದು ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟರು.

ಮಹಿಳಾ ವೈದ್ಯರನ್ನು ಮಧ್ಯರಾತ್ರಿ ಊಟಕ್ಕೆ ಕರೆದ ಆರೋಪಿ ವೈದ್ಯ!

ಮಧ್ಯರಾತ್ರಿ ಆರೋಪಿ ವೈದ್ಯ ತನ್ನ ಮಹಿಳಾ ಸಹೋದ್ಯೋಗಿ ವೈದ್ಯರಿಗೆ ಕರೆ ಮತ್ತು ಸಂದೇಶ ಕಳುಹಿಸಿದ್ದಾರೆ. ಊಟಕ್ಕೆ ಕರೆದಿದ್ದಾರೆ. ವೀಡಿಯೋ ಕಾಲ್ ಮಾಡಿ ಮಹಿಳಾ ವೈದ್ಯರಿಗೆ ಕಿರುಕುಳ ನೀಡಿದ್ದಾರೆ ಎಂಬುದಾಗಿ ದೂರಲಾಗಿತ್ತು. ಈ ಬಗ್ಗೆ ಪೊಲಿಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. 

ಆದರೆ, ತಾವು ಯಾವುದೇ ಅಪರಾಧ ಎಸಗಿಲ್ಲ. ಕೇವಲ ಔಪಚಾರಿಕ ಸಂದೇಶ ಕಳುಹಿಸಿರುವುದಾಗಿ ಅರ್ಜಿದಾರರು ವಾದಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಪೀಠ, ನೀವು ಯಾವ ಸಂದೇಶ ಕಳಿಸಿದ್ದೀರಾ ಎಂಬ ದಾಖಲೆಗಳು ಕೋರ್ಟ್ ಮುಂದಿದೆ. ತಡರಾತ್ರಿ ಊಟಕ್ಕೆ ಬರುವಂತೆ ದೂರುದಾರರಿಗೆ ಏಕೆ ಹೇಳುತ್ತಿದ್ದೀರಿ. ಅರ್ಜಿದಾರರು ಸರ್ಕಾರಿ ನೌಕರ. ಸರ್ಕಾರಿ ಅಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವವರು.. ಸಿಬ್ಬಂದಿಯನ್ನು ಲೈಂಗಿಕವಾಗಿ ಕಿರುಕುಳ ನೀಡುವ ವೈದ್ಯರನ್ನು ಬಿಡಲು ಸಾಧ್ಯವೇ ಇಲ್ಲ. ದೋಷಾರೋಪ ಪಟ್ಟಿ ಸಲ್ಲಿಸಿದ ನಂತರ ಎಲ್ಲ ಸಂಗತಿಗಳು ಗೊತ್ತಾಗಲಿವೆ ಎಂದು ಹೇಳಿತು.

Ads on article

Advertise in articles 1

advertising articles 2

Advertise under the article