-->
ನಾಮಫಲಕದ ಬಗ್ಗೆ ಸುತ್ತೋಲೆ: ಎಲ್ಲ ಇಲಾಖೆಗೂ ರಾಜ್ಯ ಸರ್ಕಾರ ಖಡಕ್ ಆದೇಶ

ನಾಮಫಲಕದ ಬಗ್ಗೆ ಸುತ್ತೋಲೆ: ಎಲ್ಲ ಇಲಾಖೆಗೂ ರಾಜ್ಯ ಸರ್ಕಾರ ಖಡಕ್ ಆದೇಶ

ನಾಮಫಲಕದ ಬಗ್ಗೆ ಸುತ್ತೋಲೆ: ಎಲ್ಲ ಇಲಾಖೆಗೂ ರಾಜ್ಯ ಸರ್ಕಾರ ಖಡಕ್ ಆದೇಶ





ಸರ್ಕಾರದ ಎಲ್ಲ ಇಲಾಖೆಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲೇ ಇರಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಈ ಸುತ್ತೋಲೆ ಹೊರಡಿಸಿದ್ದಾರೆ.


ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ 2024 ಜಾರಿಗೆ ಬಂದಿದೆ. ಈ ನಿಯಮಗಳ ಪ್ರಕಾರ ರಾಜ್ಯ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.


ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಇಲಾಖೆಗಳ ಆಧೀನದಲ್ಲಿ ಬರುವ ಎಲ್ಲ ಕ್ಷೇತ್ರ ಇಲಾಖೆಗಳಲ್ಲಿ ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ ಮತ್ತು ಪ್ರಾಧಿಕಾರಿಗಳ ಆವರಣಗಳಲ್ಲಿ ಹೆಸರು, ಪದನಾಮ ಮತ್ತು ಸೇವಾ ಅವಧಿ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲೇ ಪ್ರದರ್ಶಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.


ಅನಿವಾರ್ಯವಾದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇಕಡಾ 60ರಷ್ಟು ನಾಮಫಲಕದ ಮೇಲ್ಬಾಗದಲ್ಲಿ ಇರುವಂತೆ ಹಾಗೂ ಶೇ 40ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿದೆ.

Ads on article

Advertise in articles 1

advertising articles 2

Advertise under the article