ಅಪಾರ್ಟ್‌ಮೆಂಟ್‌ಗಳಲ್ಲಿ ಈಜುಕೊಳ ಜವಾಬ್ದಾರಿ ಕ್ಷೇಮಾಭಿವೃದ್ಧಿ ಸಂಘಕ್ಕೆ: ಸಾವು ಸಂಭವಿಸಿದರೆ ಸಂಘವೇ ಹೊಣೆ- ಹೈಕೋರ್ಟ್ ತೀರ್ಪು
ಅಪಾರ್ಟ್‌ಮೆಂಟ್‌ಗಳಲ್ಲಿ ಈಜುಕೊಳ ಜವಾಬ್ದಾರಿ ಕ್ಷೇಮಾಭಿವೃದ್ಧಿ ಸಂಘಕ್ಕೆ: ಸಾವು ಸಂಭವಿಸಿದರೆ ಸಂಘವೇ ಹೊಣೆ- ಹೈಕೋರ್ಟ್ ತೀರ್ಪು
ವಸತಿ ಸಮುಚ್ಚಯ ಯಾ ಅಪಾರ್ಟ್‌ಮೆಂಟ್‌ಗಳಲ್ಲಿ ನಿರ್ಮಾಣಗೊಂಡಿರುವ ಈಜುಕೊಳದ ಜವಾಬ್ದಾರಿ ಆ ಅಪಾರ್ಟ್‌ಮೆಂಟಿನ ಕ್ಷೇಮಾಭಿವೃದ್ಧಿ ಸಂಘಕ್ಕೆ ಇದೆ. ನಿರ್ಲಕ್ಷ್ಯದಲ್ಲಿ ಸಾವು ಸಂಭವಿಸಿದರೆ ಅದಕ್ಕೆ ಆ ಸಂಘವೇ ಹೊಣೆ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.
ಕರ್ನಾಟಕ ಹೈಕೋರ್ಟ್‌ನ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.
ಅಪಾರ್ಟ್‌ಮೆಂಟ್‌ಗಳಲ್ಲಿ ನಿರ್ಮಿಸುವ ಈಜು ಕೊಳಗಳಲ್ಲಿ ಸಂಭವಿಸುವ ಸಾವು ಅಥವಾ ಅವಘಡಗಳನ್ನು ತಪ್ಪಿಸಲು ಜೀವ ರಕ್ಷಕರ ನೇಮಕ ಮತ್ತು ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳದಿದ್ದರೆ ಆ ಅಪಾರ್ಟ್‌ಮೆಂಟಿನ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘವೇ ಹೊಣೆಯಾಗಿದೆ. ಆ ಸಂಘದ ಪದಾಧಿಕಾರಿಗಳ ವಿರುದ್ಧ ಕ್ರಿಮಿನಲ್ ನಿರ್ಲಕ್ಷ್ಯದ ಆರೋಪಕ್ಕೆ ಗುರಿಪಡಿಸಬಹುದಾಗಿದೆ ಎಂದು ನ್ಯಾಯಪೀಠ ಹೇಳಿದೆ.
ಬೆಂಗಳೂರಿನ ಪ್ರೆಸ್ಟೀಜ್ ಲೇಕ್‌ಸೈಡ್ ಹ್ಯಾಬಿಟ್ಯಾಟ್ ಹೋಂ ಓನರ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾ ಮಾಡಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರು ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿದ ನ್ಯಾಯಪೀಠ, ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ತೀರ್ಪು ನೀಡಿತು.
ಪ್ರಕರಣ: ದೇಬಾಶಿಶ್ ಸಿನ್ಹ ಮತ್ತಿತರರು Vs ಕರ್ನಾಟಕ ಸರ್ಕಾರ
ಕರ್ನಾಟಕ ಹೈಕೋರ್ಟ್, WP No.15958/2024 Dated 06-08-2024