-->
ಕರ್ನಾಟಕದ ವಿವಿಧ ನಗರಗಳಲ್ಲಿ ಶುದ್ಧ ಗಾಳಿ ಗುಣಮಟ್ಟದಲ್ಲಿ ತೀವ್ರ ಕುಸಿತ: ಯಾವ ನಗರ ಅಪಾಯದಲ್ಲಿದೆ ಗೊತ್ತೇ..?

ಕರ್ನಾಟಕದ ವಿವಿಧ ನಗರಗಳಲ್ಲಿ ಶುದ್ಧ ಗಾಳಿ ಗುಣಮಟ್ಟದಲ್ಲಿ ತೀವ್ರ ಕುಸಿತ: ಯಾವ ನಗರ ಅಪಾಯದಲ್ಲಿದೆ ಗೊತ್ತೇ..?

ಕರ್ನಾಟಕದ ವಿವಿಧ ನಗರಗಳಲ್ಲಿ ಶುದ್ಧ ಗಾಳಿ ಗುಣಮಟ್ಟದಲ್ಲಿ ತೀವ್ರ ಕುಸಿತ: ಯಾವ ನಗರ ಅಪಾಯದಲ್ಲಿದೆ ಗೊತ್ತೇ..?





ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಶುದ್ಧ ಗಾಳಿಯ ಕೊರತೆ ಕಂಡುಬಂದಿದೆ. ಗಾಳಿಯ ಗುಣಮಟ್ಟದಲ್ಲಿ ಹಲವು ಪ್ರಮುಖ ನಗರಗಳಲ್ಲಿ ಗಂಭೀರ ಕುಸಿತ ಕಂಡುಬಂದಿದೆ.


ಕರ್ನಾಟಕದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮೈಸೂರು ಹಾಗು ಮಂಗಳೂರಿನಲ್ಲಿ ಉಸಿರಾಡುವ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದೆ. ಪರಿಸರ ಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ತಕ್ಷಣವೇ ವಾಯು ಮಾಲಿನ್ಯವನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಇಲ್ಲದಿದ್ದರೆ ಅದು ನಮ್ಮ ಆರೋಗ್ಯದ ಮೇಲೆ ಅದು ತೀವ್ರ ರೀತಿಯ ದುಷ್ಪರಿಣಾಮ ಬೀರಬಲ್ಲದು.


ದಕ್ಷಿಣ ಭಾರತದ 10 ಪ್ರಮುಖ ನಗರಗಳ ಗಾಳಿಯಲ್ಲಿ ಮಾಲಿನ್ಯಕಾರಕ ಕಣಗಳಾದ ಪಿಎಂ 2.5 (ಸೂಕ್ಷ್ಮ) ಮತ್ತು ಪಿಎಂ 10 (ಅತಿಸೂಕ್ಷ್ಮ)ಗಳ ಪ್ರಮಾಣವು ಡಬ್ಲ್ಯುಎಚ್ಒ ಮಾರ್ಗಸೂಚಿ ನಿಗದಿಪಡಿಸಿದ ಸರಾಸರಿ ಮಟ್ಟಗಳನ್ನು ಮೀರಿದ್ದು ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಗ್ರೀನ್ ಪೀಸ್ ಇಂಡಿಯಾದ 'ಸ್ಪೇರ್ ದಿ ಏರ್-2' ವರದಿ ಎಚ್ಚರಿಸಿದೆ.


ಈ ವರದಿ, ದಕ್ಷಿಣ ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು, ಮೈಸೂರು, ಹೈದರಾಬಾದ್, ಚೆನ್ನೈ, ವಿಶಾಖಪಟ್ಟಣ, ಕೊಚ್ಚಿ, ಅಮರಾವತಿ, ವಿಜಯವಾಡ, ಮತ್ತು ಪುದುಚೇರಿ ನಗರಗಳಲ್ಲಿ ಗಾಳಿಯ ಗುಣಮಟ್ಟವನ್ನು ವಿಶ್ಲೇಷಿಸುತ್ತದೆ.


ಈ ಹತ್ತು ನಗರಗಳ ಪೈಕಿ ವಿಶಾಖಪಟ್ಟಣಂನಲ್ಲಿ ಗಾಳಿಯ ಗುಣಮಟ್ಟ ತೀವ್ರ ಕುಸಿತ ಕಂಡಿದೆ. ಇಲ್ಲಿನ ಗಾಳಿಯಲ್ಲಿ ಪಿಎಂ 2.5 ಕಣಗಳ ಪ್ರಮಾಣ WHO ಮಾರ್ಗಸೂಚಿ ನಿಗದಿಪಡಿಸಿದ ಮಾನದಂಡಕ್ಕಿಂತ 10 ಪಟ್ಟು ಮತ್ತು ಪಿಎಂ 10 ಕಣಗಳ ಪ್ರಮಾಣ 9 ಪಟ್ಟು ಹೆಚ್ಚಿರುವುದು ದೃಢ ಪಟ್ಟಿದೆ.


ಅಷ್ಟೇ ಅಲ್ಲದೆ ಇದು ಗಾಳಿಯ ಗುಣಮಟ್ಟ ಮಾಪಕ ನ್ಯಾಶನಲ್‌ ಎಂಬಿಯಂಟ್‌ ಏರ್‌ ಕ್ವಾಲಿಟಿ ಸ್ಟಾಂಡರ್ಡ್‌ (ಎನ್‌ಎಎಕ್ಯೂಎಸ್‌ /NAAQS) ನಿಗದಿಪಡಿಸಿದ ಮಿತಿಗಳನ್ನೂ ಮೀರಿದೆ ಎಂದು ಅಧ್ಯಯನವು ಸ್ಪಷ್ಟಪಡಿಸಿದೆ.


WHO ಮಾರ್ಗಸೂಚಿ ಜೊತೆ ಹೋಲಿಸಿದರೆ, ಗಾಳಿಯಲ್ಲಿ ಪಿಎಂ 2.5 ಕಣಗಳ ಮಟ್ಟವು ಮಂಗಳೂರು, ಹೈದರಾಬಾದ್, ವಿಜಯವಾಡ, ಕೊಚ್ಚಿ, ಅಮರಾವತಿ ಮತ್ತು ಚೆನ್ನೈನಲ್ಲಿ 6 ರಿಂದ 7 ಪಟ್ಟು ಹೆಚ್ಚಾಗಿದೆ. ಅದೇ ರೀತಿ, ಪಿಎಂ 10 ಕಣಗಳ ಮಟ್ಟವು ಬೆಂಗಳೂರು, ಮೈಸೂರು ಮತ್ತು ಪುದುಚೇರಿ ನಗರಗಳಲ್ಲಿ 4 ರಿಂದ 5 ಪಟ್ಟು ಹೆಚ್ಚಾಗಿದೆ ಎಂಬುದನ್ನು ವರದಿಯು ದೃಢಪಡಿಸಿದೆ.



Ads on article

Advertise in articles 1

advertising articles 2

Advertise under the article