Legal Service Defense Counsel Job | ಕಾನೂನು ಸೇವಾ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಾನೂನು ಸೇವಾ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು:ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ., ಮಂಗಳೂರು ವತಿಯಿಂದ ಸ್ಥಾಪಿಸಲಾದ ಕಾನೂನು ಅಭಿರಕ್ಷಕರ ಕಛೇರಿಗೆ ಎರಡು ಉಪಮುಖ್ಯ ಕಾನೂನು ನೆರವು ಅಭಿರಕ್ಷಕರು (Deputy Legal Aid Defense Counsel) ಐದು ಸಹಾಯಕ ಕಾನೂನು ನೆರವು ಅಭಿರಕ್ಷಕರು (Assistant Legal Aid Defense Counsel) ಎರಡು ಕಛೇರಿ ಸಹಾಯಕರ ಹುದ್ದೆ ಹಾಗೂ ಎರಡು ದಲಾಯತ್ ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ತಮ್ಮ ವಿದ್ಯಾರ್ಹತೆ ಹಾಗೂ ಪೂರಕ ದಾಖಲೆಗಳ ಪ್ರತಿಯೊಂದಿಗೆ ಅಕ್ಟೋಬರ್ 3ರೊಳಗೆ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಲಯ ಆವರಣ ಮೊದಲನೇ ಮಹಡಿ ದ.ಕ., ಮಂಗಳೂರು ಇವರಿಗೆ ನೇರವಾಗಿ ಅಥವಾ ಅಂಚೆ ಮುಖೇನ ತಲುಪಿಸಬೇಕು.
ಕೊನೆ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ನಮೂನೆಯನ್ನು ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ dk.dcourts.gov.in ನಲ್ಲಿ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ., ಮಂಗಳೂರು ಕಛೇರಿಯಲ್ಲಿ ಬಂದು ಪಡೆಯುವಂತೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರವೀಂದ್ರ ಎಂ. ಜೋಶಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಂ ಶ್ರೀಮತಿ ಶೋಭಾ ಬಿ.ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.