-->
ಕೋರ್ಟ್ ಆವರಣದಲ್ಲೇ ವಕೀಲರ ಮೇಲೆ ಪೊಲೀಸ್ ಅಧಿಕಾರಿಗಳಿಂದ ಹಲ್ಲೆ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಹೈಕೋರ್ಟ್‌!

ಕೋರ್ಟ್ ಆವರಣದಲ್ಲೇ ವಕೀಲರ ಮೇಲೆ ಪೊಲೀಸ್ ಅಧಿಕಾರಿಗಳಿಂದ ಹಲ್ಲೆ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಹೈಕೋರ್ಟ್‌!

ಕೋರ್ಟ್ ಆವರಣದಲ್ಲೇ ವಕೀಲರ ಮೇಲೆ ಪೊಲೀಸ್ ಅಧಿಕಾರಿಗಳಿಂದ ಹಲ್ಲೆ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಹೈಕೋರ್ಟ್‌!






ನ್ಯಾಯಾಲಯದ ಆವರಣದಲ್ಲೇ ವಕೀಲರ ಮೇಲೆ ಹಲ್ಲೆ ನಡೆದಿರುವ ಘಟನೆಯನ್ನು ಕೇರಳ ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದೆ.


ಕೇರಳ ಹೈಕೋರ್ಟ್‌ನ ನ್ಯಾ. ಎ.ಕೆ. ಜಯಶಂಕರನ್ ನಂಬಿಯಾರ್ ಮತ್ತು ನ್ಯಾ. ಶ್ಯಾಮ್ ಕುಮಾರ್ ವಿ.ಎಂ. ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.


ಪ್ರಕರಣಕ್ಕೆ ಸಂಬಂಧಿಸಿದ ಈ ಘಟನೆ ನಡೆದಿರುವುದು ಸೆಪ್ಟಂಬರ್ 9ರಂದು ಅಲಪ್ಪುಳದ ರಾಮಾಂಕರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆವರಣದಲ್ಲಿ. ಆ ದಿನ ಕೋರ್ಟ್‌ ಆವರಣದಲ್ಲಿ ಕರ್ತವ್ಯದಲ್ಲಿ ಇದ್ದ ವಕೀಲರಾದ ಗೋಪಕುಮಾರ್ ಪಾಂಡವತ್ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು.


ಈ ಘಟನೆ ನಡೆದ ಮರುದಿನ ಕೇರಳ ಹೈಕೋರ್ಟ್ ವಕೀಲರ ಸಂಘ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎ. ಮುಹಮ್ಮದ್ ಮುಸ್ತಾಕ್ ಅವರಿಗೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದರು.


ವಿಚಾರಣೆ ವೇಳೆ, ನ್ಯಾಯಾಲಯದಲ್ಲಿ ಆವರಣದಲ್ಲಿ ವಕೀಲರ ಮೇಲೆ ಹಲ್ಲೆ ನಡೆದಿರುವುದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂದು ನ್ಯಾಯಪೀಠ ಕಳವಳ ವ್ಯಕ್ತಪಡಿಸಿತು. ಪೊಲೀಸರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ವಕೀಲರು, ನ್ಯಾಯಾಧೀಶರು ಮತ್ತು ನ್ಯಾಯಾಲಯದ ಸಿಬ್ಬಂದಿ ಜೊತೆಗೆ ಹೇಗೆ ವರ್ತಿಸಬೇಕು ಎಂಬ ಬಗ್ಗೆ ಪೊಲೀಸರಿಗೆ ಪಾಠ ಕಲಿಸಬೇಕಾದ ಅಗತ್ಯವಿದೆ ಎಂದು ನ್ಯಾಯಪೀಠ ಹೇಳಿದೆ.





ರಾಜ್ಯದಲ್ಲಿ ಪೊಲೀಸರು ಮತ್ತು ವಕೀಲರ ನಡುವೆ ಆಗಾಗ ಸಂಘರ್ಷ ನಡೆಯುತ್ತಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ಪರಿಗಣಿಸಿದ ನ್ಯಾಯಪೀಠ, ವಕೀಲರು, ನ್ಯಾಯಾಧೀಶರು ಮತ್ತು ನ್ಯಾಯಾಲಯದ ಸಿಬ್ಬಂದಿ ಜೊತೆಗೆ ಸಂವಹನ ಮಾಡುವಾಗ ಪೊಲೀಸ್ ಅಧಿಕಾರಿಗಳು ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಜಾರಿಗೊಳಿಸವುದಾಗಿ ನ್ಯಾಯಪೀಠ ತಿಳಿಸಿದೆ.


ಒಂದು ವಾರದ ಹಿಂದಷ್ಟೇ ವಕೀಲರೊಬ್ಬರಿಗೆ ಪೊಲೀಸ್ ಠಾಣೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ವೊಬ್ಬರಿಗೆ ಎರಡು ತಿಂಗಳ ಷರತ್ತುಬದ್ಧ ಶಿಕ್ಷೆ ವಿಧಿಸಿತ್ತು. ಈ ತೀರ್ಪಿನಲ್ಲಿ ಕಾನೂನು ವೃತ್ತಿಪರರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಇಲ್ಲದಿದ್ದರೆ ಎದುರಾಗುವ ಪರಿಣಾಮದ ಬಗ್ಗೆ ಪೊಲೀಸ್ ಸಿಬ್ಬಂದಿಗೆ ಎಚ್ಚರಿಕೆ ನೀಡುವ ಸಂದೇಶವನ್ನು ರವಾನಿಸಿತ್ತು.




Ads on article

Advertise in articles 1

advertising articles 2

Advertise under the article