ರಾಜ್ಯ ಕಾನೂನು ಆಯೋಗದ ಅಧ್ಯಕ್ಷರ ಆಯ್ಕೆ: ನೇಮಕ ಪ್ರಕ್ರಿಯೆ ಆರಂಭ
ರಾಜ್ಯ ಕಾನೂನು ಆಯೋಗದ ಅಧ್ಯಕ್ಷರ ಆಯ್ಕೆ: ನೇಮಕ ಪ್ರಕ್ರಿಯೆ ಆರಂಭ
ಇನ್ನು ಕೆಲವೇ ದಿನಗಳಲ್ಲಿ ತೆರವಾಗಲಿರುವ ಕರ್ನಾಟಕ ರಾಜ್ಯ ಕಾನೂನು ಆಯೋಗದ ಅಧ್ಯಕ್ಷರ ಹುದ್ದೆಗೆ ಹೊಸಬರ ನೇಮಕಾತಿಗೆ ಕಾನೂನು ಇಲಾಖೆ ಪ್ರಕ್ರಿಯೆಯನ್ನು ಆರಂಭಿಸಿದೆ.
ಸೆಪ್ಟಂಬರ್ 19ರಂದು ಕಾನೂನು ಆಯೋಗದ ಅಧ್ಯಕ್ಷರಾಗಿರುವ ಎಸ್.ಆರ್. ಬನ್ನೂರ್‌ಮಠ ಅವರ ಅಧಿಕಾರಾವಧಿ ಪೂರ್ಣಗೊಳ್ಳಲಿದೆ. ಅಂದು ಅವರು ಐದು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಲಿದ್ದಾರೆ.
ಕರ್ನಾಟಕ ರಾಜ್ಯ ಕಾನೂನು ಆಯೋಗದ ಅಧ್ಯಕ್ಷರ ಹುದ್ದೆಗೆ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅಥವಾ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಯನ್ನು ನೇಮಿಸಬೇಕಿದೆ. ಆಯೋಗದ ಅಧ್ಯಕ್ಷ, ಸದಸ್ಯರು ಮತ್ತು ಸದಸ್ಯ ಕಾರ್ಯದರ್ಶಿಗಳ ನೇಮಕಾತಿಗೆ ಗರಿಷ್ಠ ವಯೋಮಿತಿಯನ್ನು 70 ವರ್ಷಕ್ಕೆ ನಿಗದಿಪಡಿಸಲಾಗಿದೆ.
ಅಧ್ಯಕ್ಷರನ್ನು ನಾಮನಿರ್ದೇಶನ ಮಾಡುವಂತೆ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಮುಖ್ಯಮಂತ್ರಿಯವರ ಅನುಮೋದನೆಯ ಬಳಿಕ ಸಚಿವ ಸಂಪುಟಕ್ಕೆ ಈ ಪ್ರಸ್ತಾಪ ಮಂಡನೆ ಆಗಲಿದೆ.