CWC, ಜೆಜೆಬಿ ಮಂಡಳಿಗಳ ಅಧ್ಯಕ್ಷರು, ಸದಸ್ಯರ ನೇಮಕಕ್ಕೆ ಅಡ್ಡಿ: ಅಧಿಸೂಚನೆ ತಡೆಹಿಡಿದ ಸರ್ಕಾರ
Friday, September 13, 2024
CWC, ಜೆಜೆಬಿ ಮಂಡಳಿಗಳ ಅಧ್ಯಕ್ಷರು, ಸದಸ್ಯರ ನೇಮಕಕ್ಕೆ ಅಡ್ಡಿ: ಅಧಿಸೂಚನೆ ತಡೆಹಿಡಿದ ಸರ್ಕಾರ
ಮಕ್ಕಳ ಕಲ್ಯಾಣ ಸಮಿತಿ (CWC) ಮತ್ತು ಬಾಲನ್ಯಾಯ ಮಂಡಳಿ (JJB)ಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿ ರಾಜ್ಯ ಸರ್ಕಾರ ಇತ್ತೀಚಿಗಷ್ಟೆ ಅಧಿಸೂಚನೆ ಹೊರಡಿಸಿದ್ದು, ಅದನ್ನು ಆಡಳಿತಾತ್ಮಕ ಕಾರಣ ನೀಡಿ ತಡೆ ಹಿಡಿಯಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್ ಅಧಿಸೂಚನೆ ಹೊರಡಿಸಿದ್ದಾರೆ.
ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲನ್ಯಾಯ ಮಂಡಳಿಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿರುವ ಆದೇಶದಲ್ಲಿ ಗಂಭೀರ ಸ್ವರೂಪದ ದೂರುಗಳು ಕಂಡುಬಂದ ಹಿನ್ನೆಲೆಯಲ್ಲಿ ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದ ವರೆಗೆ ನೇಮಕಾತಿ ಆದೇಶವನ್ನು ತಡೆ ಹಿಡಿಯಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.