-->
ಸರ್ಕಾರಿ ನೌಕರರ ಸಂಘದ ಚುನಾವಣೆ: ಮತಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರಿಗೂ ಸ್ಪರ್ಧೆ, ಮತದಾನದ ಹಕ್ಕು- ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ಸರ್ಕಾರಿ ನೌಕರರ ಸಂಘದ ಚುನಾವಣೆ: ಮತಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರಿಗೂ ಸ್ಪರ್ಧೆ, ಮತದಾನದ ಹಕ್ಕು- ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ಸರ್ಕಾರಿ ನೌಕರರ ಸಂಘದ ಚುನಾವಣೆ: ಮತಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರಿಗೂ ಸ್ಪರ್ಧೆ, ಮತದಾನದ ಹಕ್ಕು- ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ








ಮತದಾರರ ಯಾದಿಯಲ್ಲಿ ಹೆಸರನ್ನು ಕೈಬಿಟ್ಟ ಅರ್ಹ ಮತದಾರರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ, ಮತದಾನ ಮಾಡುವ ಅವಕಾಶ ನೀಡಿ ಆದೇಶ ಹೊರಡಿಸಿದ ಹೈಕೋರ್ಟ್



ಸರ್ಕಾರಿ ನೌಕರರ ಸಂಘದ ಚುನಾವಣೆ: ಮತಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರಿಗೂ ಸ್ಪರ್ಧಿಸುವ ಮತ್ತು ಮತದಾನ ಮಾಡುವ ಹಕ್ಕನ್ನು ಕಲ್ಪಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.


ಕರ್ನಾಟಕ ಹೈಕೋರ್ಟ್‌ನ ಗುಲ್ಬರ್ಗ ವಿಭಾಗೀಯ ಪೀಠದ ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಎಸ್. ಆರ್. ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠವು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತದಾನ ಮಾಡುವ ಹಾಗೂ ಚುನಾವಣೆಗೆ ಸ್ಪರ್ಧಿಸುವ ಅವಕಾಶವನ್ನು ನೀಡಿ ದಿನಾಂಕ 15.10.2024 ರಂದು ಮಧ್ಯಂತರ ಆದೇಶ ಹೊರಡಿಸಿದೆ.


ಕಳೆದ ಐದು ವರ್ಷಗಳಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸದಸ್ಯತ್ವ ಶುಲ್ಕವನ್ನು ಕ್ರಮಬದ್ಧವಾಗಿ ಪಾವತಿಸಿದ ಸರಕಾರಿ ನೌಕರರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸದ ಕುರಿತು ದಾಖಲಿಸಿದ ರಿಟ್ ಪ್ರಕರಣದಲ್ಲಿ ರಿಟ್ ಅರ್ಜಿದಾರರ ಪರ ವಾದವನ್ನು ಆಲಿಸಿದ ನ್ಯಾಯಪೀಠ ಈ ಆದೇಶ ಹೊರಡಿಸಿತು.





ಪ್ರಕರಣದ ಸಾರಾಂಶ ಈ ಕೆಳಗಿನಂತಿದೆ.


ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಯುತರಾದ ರವೀಂದ್ರ ರೆಡ್ಡಿ, ಶರದ್ ಕುಮಾರ್, ಶೇಕ್ ಮಹಬೂಬ್ ಪಟೇಲ್, ದೇವೇಂದ್ರಪ್ಪ, ಪಶು ವೈದ್ಯಾಧಿಕಾರಿ ಡಾ. ಶಾಂತ ಕುಮಾರ್ ಮತ್ತು ಹಿರಿಯ ಸಿವಿಲ್ ನ್ಯಾಯಾಲಯದ ದ್ವಿತೀಯ ದರ್ಜೆ ಸಹಾಯಕ ಶ್ರೀ ರಾಜಪ್ಪ ಇವರುಗಳು ಕಳೆದ ಐದು ವರ್ಷದಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸದಸ್ಯತ್ವ ಶುಲ್ಕವನ್ನು ಕ್ರಮಬದ್ಧವಾಗಿ ಪಾವತಿಸಿದ್ದರು.


ಆದರೂ ಅವರ ಹೆಸರುಗಳನ್ನು ಮತದಾರರ ಯಾದಿಯಲ್ಲಿ ಸೇರಿಸದೆ ಇರುವುದರಿಂದ ದಿನಾಂಕ 28..10.2024 ರಂದು ಜರಗಲಿರುವ ಚುನಾವಣೆಯಲ್ಲಿ ಮತದಾನ ಮಾಡಲು ಹಾಗೂ ಸ್ಪರ್ಧಿಸಲು ತಮಗೆ ಅವಕಾಶ ನೀಡಲು ಚುನಾವಣಾ ಅಧಿಕಾರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಮಾನ್ಯ ಕರ್ನಾಟಕ ಹೈಕೋರ್ಟಿನ ಗುಲ್ಬರ್ಗ ಪೀಠದಲ್ಲಿ ರಿಟ್ ಅರ್ಜಿ ದಾಖಲಿಸಿದ್ದರು.


ರಿಟ್ ಅರ್ಜಿದಾರರು ಹಾಜರುಪಡಿಸಿದ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯ ಪೀಠವು ದಿನಾಂಕ 28.10.2024 ರಂದು ಹುಮ್ನಾಬಾದ್ ತಾಲೂಕು ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಲು ಹಾಗೂ ಮತದಾನ ಮಾಡಲು ರಿಟ್ ಅರ್ಜಿದಾರರಿಗೆ ಅವಕಾಶ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.


ರಿಟ್ ಅರ್ಜಿಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕೇಂದ್ರ ಸಂಘ ಬೆಂಗಳೂರು, ಜಿಲ್ಲಾ ಸಂಘ, ಬೀದರ್ ತಾಲೂಕು ಸಂಘ, ಹುಮ್ನಾಬಾದ್ ಹಾಗೂ ತಾಲೂಕು ಚುನಾವಣಾ ಅಧಿಕಾರಿಯವರನ್ನು ಎದುರುದಾರರನ್ನಾಗಿ ಮಾಡಲಾಗಿದೆ. ಎದುರುದಾರರ ಹಾಜರಾತಿ ಮತ್ತು ಹೇಳಿಕೆಗಾಗಿ ಪ್ರಕರಣದ ವಿಚಾರಣೆಯನ್ನು ದಿನಾಂಕ 25.10.2024ಕ್ಕೆ ನಿಗದಿಪಡಿಸಲಾಗಿದೆ.


ನೂರು ವರ್ಷಗಳ ಇತಿಹಾಸವಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸುಮಾರು ಐದೂವರೆ ಲಕ್ಷ ಸದಸ್ಯರನ್ನು ಹೊಂದಿರುವ ಬಲಾಢ್ಯ ನೌಕರ ಸಂಘಟನೆಯಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಉದ್ದೇಶಪೂರ್ವಕವಾಗಿ ಅರ್ಹ ಮತದಾರರ ಹೆಸರನ್ನು ಕೈಬಿಡಲಾಗಿದೆ ಎಂಬ ದೂರು ವ್ಯಾಪಕವಾಗಿ ಕೇಳಿ ಬಂದಿದೆ. ಮತದಾರರ ಪಟ್ಟಿಯನ್ನು ಪ್ರಕಟಿಸದಿರುವ, ಚುನಾವಣಾ ಅಧಿಕಾರಿಯನ್ನು ನೇಮಿಸದಿರುವ ಹಲವಾರು ದೂರುಗಳು ದಾಖಲಾಗಿವೆ.


ಮತದಾರರ ಪಟ್ಟಿಯನ್ನು ಪ್ರಕಟಿಸಿದರೆ ಮಾತ್ರ ಲೋಪದೋಷ, ನ್ಯೂನತೆಗಳು ತಿಳಿದು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ದೊರೆಯುವುದು. ಚುನಾವಣಾ ನಾಮಪತ್ರ ಸಲ್ಲಿಸುವ ಆರಂಭದ ದಿನದ ವರೆಗೂ ಮತದಾರರ ಪಟ್ಟಿಯನ್ನು ಪ್ರಕಟಿಸದೇ ಇದ್ದಲ್ಲಿ ಅರ್ಹ ಮತದಾರರು ಮತದಾನದಿಂದ ವಂಚಿತರಾಗುವ ಸಾಧ್ಯತೆ ಇದೆ.


ಈ ಬಾರಿ ರಾಜ್ಯ ಸರಕಾರಿ ನೌಕರರ ಸಂಘದಲ್ಲಿ ಮುಕ್ತ, ಪಾರದರ್ಶಕ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಯುತ್ತಿಲ್ಲ ಎಂಬ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬರುತ್ತಿವೆ. ತಮಗೆ ಅನುಕೂಲವಾಗುವ ರೀತಿಯಲ್ಲಿ ಮತಕ್ಷೇತ್ರಗಳ ಬದಲಾವಣೆ ಮಾಡಿ ಕೊನೆಯ ಕ್ಷಣದವರೆಗೆ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡದೆ ದುರ್ಲಾಭ ಪಡೆಯುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ತಾಲೂಕು ಹಾಗೂ ಜಿಲ್ಲಾ ಸಂಘದ ಮತದಾರರಿಂದ ದೂರುಗಳು ದಾಖಲಾಗಿವೆ.


ಮಾನ್ಯ ಕರ್ನಾಟಕ ಹೈಕೋರ್ಟ್ ನ ಗುಲ್ಬರ್ಗಾ ನ್ಯಾಯಪೀಠವು ನೀಡಿದ ಮಧ್ಯಂತರ ಆದೇಶವು ಮತದಾರರ ಪಟ್ಟಿಯಿಂದ ಕೈಬಿಟ್ಟ ಅರ್ಹ ಮತದಾರರ ಪಾಲಿಗೆ ವರದಾನವಾಗಿದೆ. ಸದರಿ ಆದೇಶದ ಪ್ರತಿಯನ್ನು ಹಾಗೂ ಸದಸ್ಯತ್ವ ಪಾವತಿಸಿದ ಸೂಕ್ತ ದಾಖಲೆಗಳನ್ನು ಚುನಾವಣಾ ಅಧಿಕಾರಿಗಳ ಸಮಕ್ಷಮ ಮಂಡಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಿಕೊಳ್ಳುವ ಉಜ್ವಲ ಅವಕಾಶ ಅರ್ಹ ಮತದಾರರಿಗೆ ದೊರೆತಿದೆ.





Ads on article

Advertise in articles 1

advertising articles 2

Advertise under the article