-->
ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ನೇಮಕ ನಿರ್ಧಾರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ

ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ನೇಮಕ ನಿರ್ಧಾರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ

ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ನೇಮಕ ನಿರ್ಧಾರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ






ಮಹತ್ವದ ನಿರ್ಧಾರವೊಂದರಲ್ಲಿ ಕರ್ನಾಟಕ ರಾಜ್ಯದ ಸಮಸ್ತ ಸರಕಾರಿ ನೌಕರರನ್ನು ಪ್ರತಿನಿಧಿಸುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿ ಕರ್ನಾಟಕ ಸರಕಾರವು ಆದೇಶ ಹೊರಡಿಸಿತ್ತು.


ಈ ಆದೇಶಕ್ಕೆ ಸರ್ಕಾರಿ ನೌಕರರಿಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವೊಂದು ಜಿಲ್ಲೆಗಳಲ್ಲಿ ಈ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತವಾಗಿದ್ದರೆ, ಬಹುತೇಕ ಜಿಲ್ಲೆಗಳಲ್ಲಿ ಸರ್ಕಾರಿ ನೌಕರರು ಆಡಳಿತಾಧಿಕಾರಿಗಳ ನೇಮಕದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.


ಈಗಾಗಲೇ ಚುನಾವಣೆ ಘೋಷಣೆಯಾಗಿದೆ. ಚುನಾವಣಾಧಿಕಾರಿಯನ್ನೂ ನೇಮಿಸಲಾಗಿದೆ. ಮೊದಲ ಹಂತದಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಇಲಾಖೆಗಳ ರಾಜ್ಯ ಪರಿಷತ್‌ನ 102 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 42 ಸ್ಥಾನಗಳಿಗೆ ಸರ್ಕಾರಿ ನೌಕರರ ಸಂಘದ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಚುನಾವಣಾ ಪ್ರಕ್ರಿಯೆಯ ನಡುವೆಯೇ ಸಂಘಕ್ಕೆ ಆಡಳಿತಾಧಿಕಾರಿಯೊಬ್ಬರನ್ನು ಸರ್ಕಾರ ನೇಮಕ ಮಾಡಿರುವುದು ಸಂಘದ ಇತಿಹಾಸದಲ್ಲೇ ಇದು ಮೊದಲು. ಚುನಾವಣೆ ನ್ಯಾಯಸಮ್ಮತವಾಗಿ ನಡೆಯಬೇಕು, ಪಾರದರ್ಶಕ ಕ್ರಮಗಳನ್ನು ಚುನಾವಣಾಧಿಕಾರಿ ತೆಗೆದುಕೊಳ್ಳಬೇಕು ಎಂದು ನೌಕರರ ಸಂಘದ ಮುಂದಾಳುಗಳು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ:

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ ಸರಕಾರದ ಆದೇಶ




Ads on article

Advertise in articles 1

advertising articles 2

Advertise under the article