-->
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ ಸರಕಾರದ ಆದೇಶ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ ಸರಕಾರದ ಆದೇಶ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ ಸರಕಾರದ ಆದೇಶ






ಮಹತ್ವದ ನಿರ್ಧಾರವೊಂದರಲ್ಲಿ ಕರ್ನಾಟಕ ರಾಜ್ಯದ ಸಮಸ್ತ ಸರಕಾರಿ ನೌಕರರನ್ನು ಪ್ರತಿನಿಧಿಸುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿ ಕರ್ನಾಟಕ ಸರಕಾರವು ಆದೇಶ ಹೊರಡಿಸಿದೆ.


ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಬಿ.ಪಿ. ಮಂಜೇಗೌಡ, ರಾಜ್ಯ ಪರಿಷತ್ ಸದಸ್ಯರಾದ ಶ್ರೀ ಬಿ. ಗಂಗಾಧರ್ ಮತ್ತು ಎನ್‌.ಪಿ.ಎಸ್. ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಶಾಂತರಾಮ್ ಇವರುಗಳು ಮುಕ್ತ, ಪಾರದರ್ಶಕ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ಸಲುವಾಗಿ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಕೋರಿ ಸರಕಾರಕ್ಕೆ ಪತ್ರ ಬರೆದಿದ್ದರು.


ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು ಬೃಹತ್ ಸಂಘವಾಗಿದ್ದು ಸಂಘದ ಆಡಳಿತ ಮಂಡಳಿಯ ಅವಧಿ ಮುಗಿದಿರುವುದರಿಂದ ಸಂಘದ ಸದಸ್ಯರ ಹಾಗೂ ಸಾರ್ವಜನಿಕ ಹಿತ ದೃಷ್ಟಿಯಿಂದ ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವ ವರೆಗೆ ಆಡಳಿತಾಧಿಕಾರಿಯನ್ನು ನೇಮಿಸಲು ತೀರ್ಮಾನಿಸಿ ಸರಕಾರವು ಆದೇಶ ಸಂಖ್ಯೆ ಸಿಒ 42 ಸಿಎಸ್ ಆರ್ 2023 ಬೆಂಗಳೂರು, ದಿನಾಂಕ 7-10-2024ರಂತೆ ಕರ್ನಾಟಕ ಸರಕಾರ ನಡವಳಿಯನ್ನು ಹೊರಡಿಸಿತು.





ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಕಲಂ 27 ಎ ರನ್ವಯ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು-1 ಈ ಸಂಘಕ್ಕೆ ಶ್ರೀ ಸಿ.ಎನ್. ಮಂಜುನಾಥ್ ಕೆ.ಎ.ಎಸ್. (ಆಯ್ಕೆ ಶ್ರೇಣಿ) ಪ್ರಧಾನ ವ್ಯವಸ್ಥಾಪಕರು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಇವರನ್ನು ಆದೇಶ ಹೊರಡಿಸಿದ ದಿನಾಂಕದಿಂದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯಾಗಿ ನೇಮಿಸಿ ಆದೇಶಿಸಲಾಗಿದೆ.


ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿದ್ದು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಶಾಖೆಗಳನ್ನು ಹೊಂದಿದೆ. ಕರ್ನಾಟಕ ರಾಜ್ಯದ ಸರಕಾರಿ ನೌಕರರ ಬೃಹತ್ ಸಂಘಟನೆಯಾಗಿರುವ ಈ ಸಂಘದ ಹಾಲಿ ಆಡಳಿತ ಮಂಡಳಿಯ ಅವಧಿ ಮುಗಿದು ಎರಡು ತಿಂಗಳುಗಳು ಕಳೆದರೂ ನೂತನ ಆಡಳಿತ ಮಂಡಳಿಗೆ ಚುನಾವಣೆಗಳು ನಡೆದಿಲ್ಲ. ಮತದಾರರ ಪಟ್ಟಿಗಳು ಅಂತಿಮಗೊಂಡಿಲ್ಲ. ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ಸಲುವಾಗಿ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.




Ads on article

Advertise in articles 1

advertising articles 2

Advertise under the article