ಬಿಗ್ ಬಾಸ್‌ಗೆ ಮತ್ತೊಂದು ಸಂಕಷ್ಟ! ಶೋ ಆಯೋಜಕರಿಗೆ ಪೊಲೀಸರ ನೋಟೀಸ್
ಬಿಗ್ ಬಾಸ್‌ಗೆ ಮತ್ತೊಂದು ಸಂಕಷ್ಟ! ಶೋ ಆಯೋಜಕರಿಗೆ ಪೊಲೀಸರ ನೋಟೀಸ್
ಕಲರ್ಸ್ ಕನ್ನಡ ಚಾನೆಲ್‌ನಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ರಿಯಾಲಿಟಿ ಷೋ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಕಾರ್ಯಕ್ರಮದ ಆಯೋಜಕರಿಗೆ ಕುಂಬಳಗೋಡು ಪೊಲೀಸ್ ಠಾಣೆಯ ಪೊಲೀಸರು ನೋಟೀಸ್ ಜಾರಿಗೊಳಿಸಿದ್ದು, ಬಿಗ್ ಬಾಸ್ ಮತ್ತೊಂದು ಕಾನೂನಿನ ಕುಣಿಕೆಯಲ್ಲಿ ಸಿಕ್ಕಿಕೊಂಡಿದೆ.
ಕಾರ್ಯಕ್ರಮದಲ್ಲಿ ಮಹಿಳೆಯರನ್ನು ಅಕ್ರಮವಾಗಿ ಬಂಧಿಸಿಡಲಾಗಿದೆ ಎಂದು ದೂರು ದಾಖಲಾಗಿದ್ದು, ಈ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಕಾರ್ಯಕ್ರಮ ಆಯೋಜಕರಿಗೆ ನೋಟೀಸ್‌ನಲ್ಲಿ ಕೇಳಿಕೊಳ್ಳಲಾಗಿದೆ.
ಈ ಘಟನೆಯ ಬಗ್ಗೆ ಮಹಿಳಾ ಆಯೋಗವು ಕುಂಬಳಗೋಡು ಪೊಲೀಸರಿಗೆ ದೂರು ನೀಡಿತ್ತು. ಈ ದೂರಿನ ಆಧಾರದಲ್ಲಿ ಪೊಲೀಸರು ನೋಟೀಸ್ ಜಾರಿಗೊಳಿಸಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ, ಕಾರ್ಯಕ್ರಮದ ಆಯೋಜಕರು ವಿಚಾರಣೆಗೆ ಲಭ್ಯವಾಗಿರಲಿಲ್ಲ. ಈ ಕಾರಣಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿಗೊಳಿಸಲಾಗಿದೆ.
ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ವರ್ಗ ಮತ್ತು ನರಕ ಟಾಸ್ಕ್‌ನಲ್ಲಿ ಮಹಿಳೆಯರನ್ನು ಬಂಧಿ ಮಾಡಲಾಗಿತ್ತು.
ಪೊಲೀಸರ ನೋಟೀಸ್‌ಗೆ ಸ್ಪಂದಿಸಿರುವ ಬಿಗ್ ಬಾಸ್ ಕಾರ್ಯಕ್ರಮದ ಆಯೋಜಕರು ಬಂದು ಪೊಲೀಸರಿಗೆ ಹೇಳಿಕೆ ನೀಡಿ ಹೋಗಿದ್ದಾರೆ ಎಂಬುದಾಗಿ ಪೊಲೀಸ್ ಇಲಾಖೆ ಹೇಳಿದ್ದು, ತಮ್ಮನ್ನು ಹೇಗೆ ಸಮರ್ಥಿಸಿಕೊಂಡಿದ್ದಾರೆ ಎಂಬುದು ತಿಳಿದುಬಂದಿಲ್ಲ.