ಸಮಾಜವಾದಿ, ಜಾತ್ಯತೀತ ಪದ ತೆಗೆಯಲು ಕೋರಿದ್ದ ಅರ್ಜಿ : ಸುಪ್ರೀಂ ಕೋರ್ಟ್ ತಿರಸ್ಕಾರ
ಸಮಾಜವಾದಿ, ಜಾತ್ಯತೀತ ಪದ ತೆಗೆಯಲು ಕೋರಿದ್ದ ಅರ್ಜಿ : ಸುಪ್ರೀಂ ಕೋರ್ಟ್ ತಿರಸ್ಕಾರ
ಸಂವಿಧಾನ ಪೀಠಿಕೆಯಿಂದ ಸಮಾಜವಾದಿ, ಜಾತ್ಯತೀತ ಮತ್ತು ಸಮಗ್ರತೆ ಎಂಬ ಪದಗಳನ್ನು ತೆಗೆದುಹಾಕುವಂತೆ ಕೋರಿದ್ದ ಮೂರು ಅರ್ಜಿಗಳನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರ ಪ್ರಸ್ತಾವನೆ (ಪೀಠಿಕೆ)ಗೂ ಅನ್ವಯವಾಘುತ್ತದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾ. ಪಿ.ವಿ. ಸಂಜಯ್ ಕುಮಾರ್ ಅವರಿದ್ದ ನ್ಯಾಯಪೀಠ ಮಹತ್ವದ ತೀರ್ಪು ನೀಡಿದೆ.
ರಿಟ್ ಅರ್ಜಿಗಳ ಕುರಿತು ಹೆಚ್ಚು ಚರ್ಚೆ ನಡೆಸಿ ತೀರ್ಪು ನೀಡುವ ಅಗತ್ಯವಿಲ್ಲ. ಸಂವಿಧಾನವನ್ನು ತಿದ್ದುಪಡಿ ಮಾಡುವ ಅಧಿಕಾರ ಸಂಸತ್ತಿಗೂ ಇದೆ. ಅದು ಪ್ರಸ್ತಾವನೆಗೂ ಅನ್ವಯಿಸುತ್ತದೆ. ಇಷ್ಟು ವರ್ಷಗಳ ಬಳಿಕ ಪ್ರಕ್ರಿಯೆಯನ್ನು ರದ್ದು ಮಾಡಲಾಗದು ಎಂದು ನ್ಯಾಯಪೀಠ ವಿವರಿಸಿದೆ.
1976ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಕಾಲದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಜಾರಿಯಲ್ಲಿ ಇದ್ದಾಗ 42ನೇ ತಿದ್ದುಪಡಿ ಮೂಲಕ ಈ ಪದಗಳನ್ನು ಸಂವಿಧಾನದ ಪ್ರಸ್ತಾವನೆಗೆ ಸೇರಿಸಲಾಗಿತ್ತು ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ಸಂವಿಧಾನದ 368ನೇ ವಿಧಿಯ ಅಡಿ ಸಂವಿಧಾನವನ್ನು ತಿದ್ದುಪಡಿ ಮಾಡಿದ ದಿನಾಂಕವು ಅದರ ಅಧಿಕಾರವನ್ನು ಮೊಟಕುಗೊಳಿಸಲಾಗದು ಎಂದು ತೀರ್ಪಿನಲ್ಲಿ ಹೇಳಲಾಗಿದೆ.