ಪ್ರೇಯಸಿಯ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸು ದಾಖಲಿಸಲಾಗದು: ಸುಪ್ರೀಂ ಕೋರ್ಟ್ ತೀರ್ಪು
ಪ್ರೇಯಸಿಯ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸು ದಾಖಲಿಸಲಾಗದು: ಸುಪ್ರೀಂ ಕೋರ್ಟ್ ತೀರ್ಪು
ಪತಿಯ ಗೆಳತಿ ಆಗಿರುವುದಕ್ಕೆ ಅಥವಾ ಆತನ ಜೊತೆ ಪ್ರಣಯ ಸಂಬಂಧ ಹೊಂದಿರುವ ಆರೋಪದ ಮೇಲೆ ಆಕೆಯ ವಿರುದ್ಧ ಆತನ ಪತಿಯು ಭಾರತೀಯ ದಂಡ ಸಾಹಿತಿ ಐಪಿಸಿ ಸೆಕ್ಷನ್ 498 ಎ ಅಡಿ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿ ಕಾನೂನು ಕ್ರಮಕ್ಕೆ ಮುಂದಾಗಲು ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರು ಇದ್ದ ವಿಭಾಗಿಯ ಪೀಠ ಈ ತೀರ್ಪು ನೀಡಿದೆ
ವರದಕ್ಷಿಣೆ ಕಿರುಕುಳದ ಆರೋಪದ ಅಡಿಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದಾದರೆ ಪತಿಯ ಜೊತೆ ಆ ವ್ಯಕ್ತಿಯು ರಕ್ತ ಸಂಬಂಧ ವೈವಾಹಿಕ ಸಂಬಂಧ ಅಥವಾ ದತ್ತು ಮೂಲಕ ಬರುವ ಸಂಬಂಧ ಹೊಂದಿರಬೇಕು ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಲಾಗಿದೆ.
2021ರ ಏಪ್ರಿಲ್ 12ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವೊಂದನ್ನು ವಿಭಾಗಿಯ ಪೀಠ ಈ ಮೂಲಕ ರದ್ದುಪಡಿಸಿದೆ.
ಐಪಿಸಿ ಸೆಕ್ಷನ್ 498 ಎ, 504 ಮತ್ತು 109 ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 3 ಮತ್ತು 4ರ ಅಡಿಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಹಾಗೂ ನಂತರದ ದೋಷಾರೋಪ ಪಟ್ಟಿಯನ್ನು ಪ್ರಶ್ನಿಸಿ, ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತು.