-->
ಜಾಮೀನುದಾರಿಂದ ಫೋರ್ಜರಿ: ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್‌ ಸಲ್ಲಿಕೆ- ಪ್ರಕರಣ ದಾಖಲು

ಜಾಮೀನುದಾರಿಂದ ಫೋರ್ಜರಿ: ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್‌ ಸಲ್ಲಿಕೆ- ಪ್ರಕರಣ ದಾಖಲು

ಜಾಮೀನುದಾರಿಂದ ಫೋರ್ಜರಿ: ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್‌ ಸಲ್ಲಿಕೆ- ಪ್ರಕರಣ ದಾಖಲು





ನ್ಯಾಯಾಲಯದಲ್ಲಿ ಆರೋಪಿಗಳಿಗೆ ಜಾಮೀನು ಸಲ್ಲಿಸುವ ಸಂದರ್ಭದಲ್ಲಿ ಜಾಮೀನುದಾರೊಬ್ಬರು ನ್ಯಾಯಾಲಯಕ್ಕೆ ಫೋರ್ಜರಿ ಮಾಡಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಉಡುಪಿ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದಿದೆ.


ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ನೀಡುವ ಸಂದರ್ಭದಲ್ಲಿ ನಕಲಿ ಆಧಾರ್ ಕಾರ್ಡ್‌ ಸಲ್ಲಿಕೆಯಾಗಿದೆ.


ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಫಾಸ್ಟ್ ಟ್ರ್ಯಾಕ್ ಸ್ಪೆಷಲ್ ಕೋರ್ಟ್ (ಎಫ್‌ಟಿಎಸ್‌ಸಿ)ಯಲ್ಲಿ ವಿಚಾರಣೆ ಹಂತದಲ್ಲಿ ಇದ್ದ ಕೇಸಿನಲ್ಲಿ ಇಬ್ರಾಹಿಂ ಎಂ.ಐ ಮತ್ತು ಎ.ಕೆ. ಹಮೀದ್ ಎಂಬವರು ಕೋರ್ಟ್ ಮುಂದೆ ಹಾಜರಾಗಿ ಆರೋಪಿಗಳ ಪರ ಜಾಮೀನು ನೀಡಲು ಆಧಾರ್‌ ಕಾರ್ಡ್‌ನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.


ಇವರುಗಳು ಈಗಾಗಲೇ ವಿವಿಧ ನ್ಯಾಯಾಲಯಗಳಲ್ಲಿ ಹಾಜರುಪಡಿಸಿದ ಆಧಾರ್ ಕಾರ್ಡ್‌ನ್ನು ಹಾಗೂ ಈ ದಿನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಆಧಾರ್ ಕಾರ್ಡ್‌ಗಳನ್ನು ಪರಿಶೀಲಿಸಿದಾಗ ಸಾಮ್ಯತೆ ಇಲ್ಲದಿರುವುದು ಕಂಡು ಬಂದಿತ್ತು.


ಕೋರ್ಟಿಗೆ ಮೋಸ ಮಾಡುವ ದುರುದ್ದೇಶದಿಂದ ನಕಲಿ ಆಧಾರ್‌ ಕಾರ್ಡ್ ಸೃಷ್ಟಿಸಿರುವುದು ಬಯಲಿಗೆ ಬಂದಿತು. ಘಟನೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಮುಖ್ಯ ಕಾರ್ಯನಿರ್ವಾಹಕರಾದ ಅಬ್ಬಾಸ್ ಎಸ್. ಅವರು ಈ ಬಗ್ಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ. ದೂರಿನಲ್ಲಿ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.



Ads on article

Advertise in articles 1

advertising articles 2

Advertise under the article