ಬೆಂಗಳೂರು ವಕೀಲರ ಸಂಘದ ಚುನಾವಣೆಯಲ್ಲಿ ಶೇಕಡ 33 ಮಹಿಳಾ ಮೀಸಲಾತಿ: ರಾಜ್ಯ ಸರ್ಕಾರ, ವಕೀಲರ ಸಂಘಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು ವಕೀಲರ ಸಂಘದ ಚುನಾವಣೆಯಲ್ಲಿ ಶೇಕಡ 33 ಮಹಿಳಾ ಮೀಸಲಾತಿ: ರಾಜ್ಯ ಸರ್ಕಾರ, ವಕೀಲರ ಸಂಘಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು ವಕೀಲರ ಸಂಘದ ಚುನಾವಣೆಯಲ್ಲಿ ಶೇಕಡ 33 ಮಹಿಳಾ ಮೀಸಲಾತಿ ನೀಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರ ಮತ್ತು ಬೆಂಗಳೂರು ವಕೀಲರ ಸಂಘಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಶೇಕಡ 33 ರಷ್ಟು ಮೀಸಲಾತಿ ಸ್ಥಾನವನ್ನು ಕಲ್ಪಿಸಲು ನಿರ್ದೇಶಿಸಬೇಕು ಎಂದು ಕೋರಲಾದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಕರ್ನಾಟಕ ಹೈಕೋರ್ಟ್ ಈ ನೋಟೀಸ್ ಜಾರಿಗೊಳಿಸಿದೆ.
ಬೆಂಗಳೂರಿನ ವಕೀಲರಾದ ದೀಕ್ಷಾ ಅಮೃತೇಶ್ ಎಂಬವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ರಜಾ ಕಾಲಿನ ಏಕ ಸದಸ್ಯ ನ್ಯಾಯಪೀಠ ಈ ನೋಟಿಸ್ ಜಾರಿಗೊಳಿಸಿದೆ.
ಅರ್ಜಿಯಲ್ಲಿ ಏನಿದೆ ?
ಬೆಂಗಳೂರು ವಕೀಲರ ಸಂಘದ ಹಾಲಿ ಪದಾಧಿಕಾರಿಗಳ ಅಧಿಕಾರಾವಧಿ 2024 ಡಿಸೆಂಬರ್ 19ಕ್ಕೆ ಅಂತ್ಯವಾಗಿದೆ. 2025ರ ಫೆಬ್ರವರಿ 2ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಚುನಾವಣೆಯಲ್ಲಿ 33 ರಷ್ಟು ಮೀಸಲಾತಿ ನಿಗದಿಪಡಿಸಬೇಕು ಈ ಬಗ್ಗೆ ಬೆಂಗಳೂರು ವಕೀಲರ ಸಂಘಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ಚುನಾವಣೆಯಲ್ಲಿ ಮೂರನೇ ಒಂದರಷ್ಟು ಸ್ಥಾನವನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂಬ ಬಗ್ಗೆ ವಕೀಲರ ಸಂಘಕ್ಕೆ ಅರ್ಜಿಯಲ್ಲಿ ನೀಡಲಾಗಿತ್ತು ಆದರೆ ಅವರಿಂದ ಯಾವುದೇ ಪೂರಕ ಪ್ರತಿಕ್ರಿಯೆ ಲಭ್ಯವಾಗಿಲ್ಲ ಹೀಗಾಗಿ ಸಂಘದ ಬೈಲಾಗಿ ತಿದ್ದುಪಡಿ ಮಾಡುವ ಮೂಲಕ ತಮ್ಮ ಮನವಿ ಪತ್ರ ಪರಿಗಣಿಸಿ ಮಹಿಳೆಯರಿಗೆ ಶೇಕಡ 33 ರಷ್ಟು ಸೀಟುಗಳ ಮೀಸಲಾತಿ ಕಲ್ಪಿಸಲು ಪ್ರತಿವಾದಿಗಳಿಗೆ ಆದೇಶಿಸಬೇಕು ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಕೋರಿಕೆ ಸಲ್ಲಿಸಿದ್ದಾರೆ.