
ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ದುರ್ಬಳಕೆಗೆ ಅವಕಾಶ ಇಲ್ಲ: ಕರ್ನಾಟಕ ಹೈಕೋರ್ಟ್
ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ದುರ್ಬಳಕೆಗೆ ಅವಕಾಶ ಇಲ್ಲ: ಕರ್ನಾಟಕ ಹೈಕೋರ್ಟ್
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಎಸ್ಸಿ ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ದುರುಪಯೋಗಕ್ಕೆ ಯಾವುದೇ ಅವಕಾಶ ಇಲ್ಲ. ಇಂತಹ ಕಾಯ್ದೆ ದುರ್ಬಳಕೆ ಆಗಬಾರದು ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.
ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಎಸ್ಸಿ ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಖಾಸಗಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ನ್ಯಾಯಪೀಠ ರದ್ದುಪಡಿಸುತ್ತಿದೆ ಎಂದು ನ್ಯಾಯಪೀಠ ತೀರ್ಪು ನೀಡಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ಗಿರಿನಗರದ ಕೆ ಎಸ್ ವಿಶ್ವಕಿರಣ್ ಎಂಬವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ ಈ ತೀರ್ಪು ನೀಡಿದೆ.
ಅರ್ಜಿದಾರರು ಜಾತಿಯ ಹೆಸರಲ್ಲಿ ನಿಂದಿಸಿದ್ದಾರೆ ಎಂದು ಹೇಳಲು ಈ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರ ವಿಲ್ಲ. ಫಿರ್ಯಾದಿಯವರು ಸಲ್ಲಿಸಿದ ಆರೋಪದಲ್ಲೂ ದೂರಿನಲ್ಲೂ ಸ್ಪಷ್ಟತೆ ಮತ್ತು ನಿಖರತೆಯ ಕೊರತೆ ಎದ್ದು ಕಾಣುತ್ತಿದೆ ಎಂಬ ಅಭಿಪ್ರಾಯದೊಂದಿಗೆ ಪ್ರಕರಣವನ್ನು ವಜಾಗೊಳಿಸಲಾಗಿದೆ.
ಆರೋಪಿಯು ಆಂಜಿನಮ್ಮ ಎಂಬವರ ಜಾತಿ ಹೆಸರನ್ನು ಹಿಡಿದು ತುಚ್ಚವಾದ ಶಬ್ದಗಳ ಮೂಲಕ ನಿಂದಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಆದರೆ, ಈ ಪ್ರಕರಣದಲ್ಲಿ ಬೈಸಿಕೊಂಡಿರುವ ಅಂಜಿನಮ್ಮ ಯಾವುದೇ ದೂರು ನೀಡಿಲ್ಲ.
ಪ್ರಕರಣದಲ್ಲಿ ದೂರು ನೀಡಿರುವುದು ರಾಮಯ್ಯ ಎಂಬವರು. ಈ ಫಿರ್ಯಾದಿ ರಾಮಯ್ಯ ಎಂಬವರಿಗೆ ಈ ಪ್ರಕರಣದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಹೀಗಿರುವಾಗ ಈ ಪ್ರಕರಣವನ್ನು ಮುಂದುವರಿಸಿದರೆ ಕಾನೂನಿನ ದುರ್ಬಳಕೆ ಆಗಲಿದೆ. ಹಾಗಾಗಿ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲಾಗುತ್ತಿದೆ ಎಂದು ನ್ಯಾಯ ಪೀಠ ತನ್ನ ತೀರ್ಪಿನಲ್ಲಿ ಹೇಳಿದೆ.