-->
ಜನನ ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ಅಗತ್ಯ: ಕರ್ನಾಟಕ ಹೈಕೋರ್ಟ್

ಜನನ ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ಅಗತ್ಯ: ಕರ್ನಾಟಕ ಹೈಕೋರ್ಟ್

ಜನನ ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ಅಗತ್ಯ: ಕರ್ನಾಟಕ ಹೈಕೋರ್ಟ್





ಜನನ ಮರಣ ನೋಂದಣಿ ಕಾಯ್ದೆ -1969ಗೆ ತಿದ್ದುಪಡಿ ತರಬೇಕಾದ ಅಗತ್ಯ ಇದೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.


ಕರ್ನಾಟಕ ಹೈಕೋರ್ಟ್‌ನ ನ್ಯಾ. ಎಸ್. ಸಂಜಯ ಗೌಡ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.


ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಲಾದ ಹೆಸರನ್ನು ಮತ್ತೊಮ್ಮೆ ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸಬೇಕಾಗಿದೆ. ವ ನಿಟ್ಟಿನಲ್ಲಿ ಈ ತಿದ್ದುಪಡಿ ಅಗತ್ಯವಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.


ರಾಜ್ಯ ಕಾನೂನು ಆಯೋಗ 2023ರಂದು ಸರ್ಕಾರಕ್ಕೆ 24ನೇ ವರದಿಯನ್ನು ಸಲ್ಲಿಸಿದ್ದು, ಈ ವರದಿಯಲ್ಲಿ ನಮೂದಿಸಲಾದ ಶಿಫಾರಸುಗಳನ್ನು ಪರಿಗಣಿಸಿ ಕಾಯ್ದೆಗೆ ತಿದ್ದುಪಡಿ ತರುವುದು ಸೂಕ್ತವಾಗಿದೆ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.


ಉಡುಪಿ ಜಿಲ್ಲೆಯ ಅಂಬಲಪಾಲಿಯ ಪೋಷಕರೊಬ್ಬರು ತಮ್ಮ ಮಗನ ಹೆಸರನ್ನು ಬದಲಾವಣೆಗೆ ಅವಕಾಶ ಕಲ್ಪಿಸಲು ಜನನ ಮತ್ತು ಮರಣ ನೋಂದಣಾಧಿಕಾರಿಗಳಿಗೆ ನಿರ್ದೇಶನ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ ಕಾಯ್ದೆಗೆ ಹೊಸ ತಿದ್ದುಪಡಿಯ ಅಗತ್ಯವನ್ನು ಒತ್ತಿ ಹೇಳಿದೆ.


ಪ್ರಸ್ತುತ ಚಾಲ್ತಿಯಲ್ಲಿ ಇರುವ ಕಾನೂನು ಪ್ರಕಾರ ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನುಮತ್ತೆ ಬದಲಾವಣೆ ಮಾಡಲು ಅವಕಾಶ ಇಲ್ಲ. ಹಾಗಾಗಿ, ಕಾಯ್ದೆಗೆ ತಿದ್ದುಪಡಿ ತರುವ ತನಕ ಪೋಷಕರು ತಮ್ಮ ಮಕ್ಕಳ ಹೆಸರನ್ನು ಬದಲಾವಣೆ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದರೆ ಪರಿಗಣಿಸಲು ಬರುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.


ಹೆಸರನ್ನು ಬದಲಾವಣೆ ಮಾಡಿಕೊಳ್ಳಲು ಬಯಸುವ ವ್ಯಕ್ತಿ ಅಥವಾ ಪೋಷಕರಿಗೆ ಇದು ಅನಗತ್ಯ ಸಮಸ್ಯೆ ಉಂಟು ಮಾಡುತ್ತದೆ. ಈ ಹಿನ್ನೆಲೆಯಲ್ಲಿ ಕಾನೂನಿಗೆ ತಿದ್ದುಪಡಿ ತರಬೇಕು. ಅಲ್ಲಿಯವರೆಗೆ ಪಾಲಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ನ್ಯಾಯಪೀಠ ತೀರ್ಪಿನಲ್ಲಿ ಹೇಳಿದೆ.


ಹೆಸರು ಬದಲಾವಣೆ ಕೋರಿ ಮಗುವಿನ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಪೀಠ, ಹೆಸರು ಬದಲಾವಣೆಗೆ ಅವಕಾಶವಿಲ್ಲ ಎಂದು ಜನನ ಮರಣ ನೋಂದಣಾಧಿಕಾರಿ ನೀಡಿದ್ದ ಹಿಂಬರಹವನ್ನು ರದ್ದುಪಡಿಸಿದೆ.


ನ್ಯಾಯಾಲಯ ಸೂಚಿಸಿರುವ ಮಾರ್ಗಸೂಚಿಗಳನ್ನು ಅನುಸರಿಸಿ ಹೆಸರು ಬದಲಾವಣೆಗೆ ಅವಕಾಶ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ಜನ್ಮ ದಿನಾಂಕ ಹಾಗೂ ಇತರ ವಿವರಗಳು ಬದಲಾವಣೆ ಆಗದೆ ಹೆಸರು ಮಾತ್ರ ಬಲಾದಲ್ಲಿ ಯಾವುದೇ ರೀತಿಯ ದುರುಪಯೋಗಕ್ಕೆ ಅವಕಾಶ ಇರುವುದಿಲ್ಲ. ಹೀಗಾಗಿ, ಹೆಸರು ಬದಲಾಯಿಸಲು ಕೋರಿ ಬಂದ ಅರ್ಜಿಗಳನ್ನು ಅಂಗೀಕರಿಸಬೇಕು ಎಂದು ನ್ಯಾಯಾಲಯ ಹೇಳಿದೆ.


ಪ್ರಕರಣದ ವಿವರ

ಉಡುಪಿಯ ಅಂಬಲಪಾಡಿ ನಿವಾಸಿ ದಂಪತಿ ತಮ್ಮ ಮಗುವಿಗೆ ಆಧ್ರಿತ್ ಭಟ್ ಎಂದು ನಾಮಕರಣ ಮಾಡಿದ್ದರು. ಆದರೆ, ಜೋತಿಷ್ಯ ಶಾಸ್ತ್ರದ ಪ್ರಕಾರ ಮಗನ ಹೆಸರನ್ನು ಶ್ರೀಜಿತ್ ಭಟ್ ಎಂಬುದಾಗಿ ಬದಲಾವಣೆ ಮಾಡುವುದಕ್ಕೆ ನಿರ್ಧರಿಸಿ, ಈ ಬಗ್ಗೆ ಪೋಷಕರು ಜನನ ಮತ್ತು ಮರಣ ನೋಂದಣಾಧಿಕಾರಿಯವರಿಗೆ ಅರ್ಜಿ ಸಲ್ಲಿಸಿದ್ದರು.


ಈ ಅರ್ಜಿಯನ್ನು ತಿರಸ್ಕರಿಸಿದ ಅಧಿಕಾರಿ, ಹಿಂಬರಹವನ್ನು ನೀಡಿದ್ದರು. ಈ ಹಿಂಬರವನ್ನು ಪ್ರಶ್ನಿಸಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು.


Ads on article

Advertise in articles 1

advertising articles 2

Advertise under the article