
ಅತ್ಯಾಚಾರ ಸಂತ್ರಸ್ತೆಗೆ ಠಾಣೆಯಲ್ಲೇ ಅತ್ಯಾಚಾರ: ದೂರು ನೀಡಲು ಬಂದಾಕೆಗೆ ದೌರ್ಜನ್ಯ- ಸ್ನೇಹಿತನ ಜೊತೆಗೆ ಪೊಲೀಸ್ ಸಿಬ್ಬಂದಿ ಅರೆಸ್ಟ್!
ಅತ್ಯಾಚಾರ ಸಂತ್ರಸ್ತೆಗೆ ಠಾಣೆಯಲ್ಲೇ ಅತ್ಯಾಚಾರ: ದೂರು ನೀಡಲು ಬಂದಾಕೆಗೆ ದೌರ್ಜನ್ಯ- ಸ್ನೇಹಿತನ ಜೊತೆಗೆ ಪೊಲೀಸ್ ಸಿಬ್ಬಂದಿ ಅರೆಸ್ಟ್!
ತನ್ನ ಮೇಲೆ ನಡೆದಿರುವ ಅತ್ಯಾಚಾರದ ಬಗ್ಗೆ ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಸಂತ್ರಸ್ತೆಗೆ ಠಾಣೆಯಲ್ಲೇ ಅತ್ಯಾಚಾರ ನಡೆದಿರುವ ಅಮಾನವೀಯ ಘಟನೆ ಬೊಮ್ಮನಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ದೂರು ನೀಡಲು ಬಂದಾಕೆಗೆ ಪೊಲೀಸ್ ಸಿಬ್ಬಂದಿ ಮತ್ತು ಆಕೆಯ ಸ್ನೇಹಿತ ರೇಪ್ ಮಾಡಿದ್ದಾರೆ.
ಈ ಬಗ್ಗೆ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ದೌರ್ಜನ್ಯ ನಡೆದಿದ್ದ ಆಕೆಯ ಸ್ನೇಹಿತನ ಜೊತೆಗೆ ಪೊಲೀಸ್ ಸಿಬ್ಬಂದಿ ಅರೆಸ್ಟ್ ಮಾಡಲಾಗಿದೆ.
ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್‌ಟೆಬಲ್ ಅರುಣ್ ತೊಣೆಪ ಹಾಗೂ ಸಂತ್ರಸ್ತೆಯ ಸ್ನೇಹಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಠಾಣಾ ವ್ಯಾಪ್ತಿಯಲ್ಲಿ ತನ್ನ ತಾಯಿಯೊಂದಿಗೆ ನೆಲೆಸಿರುವ ಸಂತ್ರಸ್ತೆಗೆ ಆಕೆಯ ಪಕ್ಕದ ಮನೆಯ ನಿವಾಸಿ ವಿವಾಹಿತ ವ್ಯಕ್ತಿಯ ಪರಿಚಯವಾಗಿದೆ. ಆರೋಪಿಯು ಪ್ರೀತಿಸಿ ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದ್ದ. ಈ ವಿಷಯವನ್ನು ಆಕೆ ತನ್ನ ತಾಯಿಗೆ ತಿಳಿಸಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಹೀಗೆ ದೂರು ನೀಡಲು ಠಾಣೆಗೆ ಬಂದ ಸಂತ್ರಸ್ತೆಯನ್ನು ಪರಿಚಯ ಮಾಡಿಕೊಂಡ ಕಾನ್ಸ್‌ಟೆಬಲ್ ಅರುಣ್ ತೊಣೆಪ ಆಕೆಗೆ ನ್ಯಾಯ ದೊರಕಿಸಿಕೊಡುವ ಜೊತೆಗೆ ಕೆಲಸವನ್ನೂ ಕೊಡಿಸುವುದಾಗಿ ಭರವಸೆ ನೀಡಿ ನಂಬಿಸಿದ್ದ.
ಕಳೆದ ಡಿಸೆಂಬರ್‌ನಲ್ಲಿ ಬಿಟಿಎಂ ಲೇಔಟ್‌ನ ಹೊಟೇಲ್‌ವೊಂದರ ಕೊಠಡಿಗೆ ಬಾಲಕಿಯನ್ನು ಕರೆಸಿಕೊಂಡ ಕಾನ್ಸ್‌ಟೆಬಲ್ ಅರುಣ್ ತೊಣೆಪ , ಆಕೆಗೆ ಅಮಲು ಬರುವ ಔಷಧಿ ಬೆರೆಸಿ ಕುಡಿಸಿ ಅತ್ಯಾಚಾರ ಎಸಗಿದ್ದಾನೆ.
ಈ ಬಗ್ಗೆ ಯಾರಿಗಾದರೂ ಹೇಳಿದರೆ ತನ್ನ ಬಳಿ ಇರುವ ಖಾಸಗಿ ವೀಡಿಯೋವನ್ನು ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆಯ ತಾಯಿ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.
ಆರೋಪಿಗಳ ವಿರುದ್ಧ ಪೋಕ್ಸೋ ಹಾಗೂ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.