-->
ಸಾರ್ವಜನಿಕ ಸೇವಕರ ವಿರುದ್ಧ ಕ್ರಮಕ್ಕೆ ಸಕ್ಷಮ ಪ್ರಾಧಿಕಾರದ ಪುರ್ವಾನುಮತಿ ಕಡ್ಡಾಯ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ಸಾರ್ವಜನಿಕ ಸೇವಕರ ವಿರುದ್ಧ ಕ್ರಮಕ್ಕೆ ಸಕ್ಷಮ ಪ್ರಾಧಿಕಾರದ ಪುರ್ವಾನುಮತಿ ಕಡ್ಡಾಯ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ಸಾರ್ವಜನಿಕ ಸೇವಕರ ವಿರುದ್ಧ ಕ್ರಮಕ್ಕೆ ಸಕ್ಷಮ ಪ್ರಾಧಿಕಾರದ ಪುರ್ವಾನುಮತಿ ಕಡ್ಡಾಯ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು



ಸಾರ್ವಜಿಕ ಸೇವಕರು ಕರ್ತವ್ಯ ನಿರ್ವಹಣೆಯ ಅವಧಿಯಲ್ಲಿ ಎಸಗಿದ ಕೃತ್ಯಗಳ ವಿಷಯದಲ್ಲಿ ಕಾನೂನು ಕ್ರಮ ಜರುಗಿಸಲು ಸಕ್ರಿಯ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಇಲ್ಲದಿದ್ದರೆ ಅಂತಹ ಪ್ರಕರಣಗಳನ್ನು ನ್ಯಾಯಾಲಯಗಳು ಪರಿಗಣನೆಗೆ ತೆಗೆದುಕೊಳ್ಳಲಾಗದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.


ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎಸ್.ಸಿ. ಶರ್ಮಾ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.


ಪರಿಭಾವನೆಯ ಅನುಮತಿ ಎನ್ನುವ ಪರಿಕಲ್ಪನೆ ಈಗಿರುವ ಕಾನೂನಿನಲ್ಲಿ ಇನ್ನೂ ಸೇರ್ಪಡೆಯಾಗಿಲ್ಲ ಎಂಬುದನ್ನು ನ್ಯಾಯಪೀಠ ಸ್ಪಷ್ಟಪಡಿಸಿದೆ.


ಈ ಹಿಂದೆ ಸುಪ್ರೀಂ ಕೋರ್ಟ್ "ವಿನೀತ್ ನಾರಾಯಣ್ Vs ಕೇಂದ್ರ ಸರ್ಕಾರ" ಪ್ರಕರಣದಲ್ಲಿ ನೀಡಿದ್ದ ತೀರ್ಪನ್ನು ಉಲ್ಲೇಖಿಸಿದ ನ್ಯಾಯಪೀಠವು, ಈ ಪ್ರಕರಣದಲ್ಲಿ ಸಿಆರ್‌ಪಿಸಿಯ ಸೆಕ್ಷನ್ 197ರ ಬಗ್ಗೆ ಹೇಳಿರಲಿಲ್ಲ. ಅದು ಸಿಬಿಐ ಹಾಗೂ ಕೇಂದ್ರ ವಿಚಕ್ಷಣಾ ಆಯೋಗಕ್ಕೆ ಇರುವ ತನಿಖಾ ಅಧಿಕಾರ ಮತ್ತು ಪ್ರಕ್ರಿಯೆ ಬಗ್ಗೆ ಹೇಳಲಾಗಿದೆ ಎಂದು ನ್ಯಾಯಪೀಠ ಹೇಳಿದೆ.


"ವಿನೀತ್ ನಾರಾಯಣ್ Vs ಕೇಂದ್ರ ಸರ್ಕಾರ" ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಆಧರಿಸಿ ಉತ್ತರ ಪ್ರದೇಶ ಸರ್ಕಾರವು ಕಾನೂನಿನ ಕ್ರಮ ಕೈಗೊಳ್ಳಲು ಸಕ್ಷಮ ಪ್ರಾಧಿಕಾರವು 90 ದಿನಗಳ ಕಾಲಮಿತಿಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ವಾದಿಸಿತ್ತು. ಸಕ್ಷಮ ಪ್ರಾಧಿಕಾರವು ಈ ಕಾಲಮಿತಿಯಲ್ಲಿ ತೀರ್ಮಾನ ಕೈಗೊಳ್ಳದೇ ಇದ್ದ ಕಾರಣದಿಂದ ಪರಿಭಾವಿತ ಅನುಮತಿಯ ಆಧಾರದಲ್ಲಿ ಕಾನೂನು ಕ್ರಮಕ್ಕೆ ಮುಂದಾಗಿದ್ದು ಸರಿ ಎಂದು ಅದು ವಾದಿಸಿತ್ತು.


ದೂರುದಾರರ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ಅವರು "ಸುಬ್ರಹ್ಮಣ್ಯನ್ ಸ್ವಾಮಿ Vs ಮನಮೋಹನ್ ಸಿಂಗ್" ಪ್ರಕರಣ ಉಲ್ಲೇಖಿಸಿ ಸಕ್ಷಮ ಪ್ರಾಧಿಕಾರವು ಯಾಔಉದೇ ವಿಸ್ತೃತ ಅವಧಿಗೆ ಮೊದಲೇ ನಿರ್ಧಾರ ತೆಗೆದುಕೊಳ್ಳದೇ ಇದ್ದಲ್ಲಿ ಕಾನೂನಿನ ಕ್ರಮ ಕೈಗೊಳ್ಳುವ ಪ್ರಸ್ತಾವಕ್ಕೆ ಅನುಮತಿ ನೀಡಲಾಗಿದೆ ಎಂದು ಪರಿಭಾವಿಸಲಾಗುತ್ತದೆ ಎಂದು ವಾದ ಮಂಡಿಸಿದ್ದರು.


Ads on article

Advertise in articles 1

advertising articles 2

Advertise under the article