-->
158 ಸಿವಿಲ್ ಜಡ್ಜ್‌ ಹುದ್ದೆ: ನೇಮಕಾತಿಗೆ ತಡೆ ನೀಡಿದ ಕರ್ನಾಟಕ ಹೈಕೋರ್ಟ್‌

158 ಸಿವಿಲ್ ಜಡ್ಜ್‌ ಹುದ್ದೆ: ನೇಮಕಾತಿಗೆ ತಡೆ ನೀಡಿದ ಕರ್ನಾಟಕ ಹೈಕೋರ್ಟ್‌

158 ಸಿವಿಲ್ ಜಡ್ಜ್‌ ಹುದ್ದೆ: ನೇಮಕಾತಿಗೆ ತಡೆ ನೀಡಿದ ಕರ್ನಾಟಕ ಹೈಕೋರ್ಟ್‌





ರಾಜ್ಯದಲ್ಲಿ ಖಾಲಿ ಇರುವ 158 ಸಿವಿಲ್ ಜಡ್ಜ್‌ ಹುದ್ದೆಗಳಿಗೆ ನಡೆಯುತ್ತಿದ್ದ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. 2025ರ ಫೆಬ್ರವರಿ 10ರಂದು ನೇಮಕಾತಿಗೆ ಅರ್ಜಿ ಆಹ್ವಾನಿಸಿ ಕರ್ನಾಟಕ ಹೈಕೋರ್ಟ್‌ ಅಧಿಸೂಚನೆ ಹೊರಡಿಸಿತ್ತು.


ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್ ಭರತ್ ಕುಮಾರ್ ಅವರು ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದಾರೆ.


"ಅಖಿಲ ಭಾರತ ನ್ಯಾಯಾಧೀಶರ ಸಂಘ ಮತ್ತಿತರರು Vs ಭಾರತ ಸರ್ಕಾರ" ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡುವ ವರೆಗೆ ಈ ನೇಮಕಾತಿಯನ್ನು ತಡೆ ಹಿಡಿಯಲಾಗಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.


ಬ್ಯಾಕ್‌ಲಾಗ್ ಹುದ್ದೆಗಳು ಸೇರಿದಂತೆ ಒಟ್ಟು 158 ಸಿವಿಲ್ ಜಡ್ಜ್‌ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಹೈಕೋರ್ಟ್‌ ಅರ್ಜಿ ಆಹ್ವಾನಿಸಿತ್ತು. ಕಾನೂನು ಪದವಿ ಹೊಂದಿರುವ ಮತ್ತು ವಕೀಲರಾಗಿ ನೋಂದಣಿ ಆಗಿದ್ದವರು ಕೆಟಗರಿಗೆ ಅನುಗುಣವಾಗಿ ವಯೋಮಿತಿಗೆ ಒಳಪಟ್ಟು ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು.


ಸಿವಿಲ್ ಜಡ್ಜ್ ಆಗುವ ನಿರೀಕ್ಷೆಯಲ್ಲಿ ಸಾವಿವಾರು ವಕೀಲರು ಈ ನೇಮಕಾತಿ ಬಯಸಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣದ ಇತ್ಯರ್ಥಕ್ಕೆ ಬಾಕಿ ಇರುವುದರಿಂದ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ.


Ads on article

Advertise in articles 1

advertising articles 2

Advertise under the article