ನ್ಯಾ. ವರ್ಮಾ ಪ್ರಕರಣದ ಬಳಿಕ ಎಚ್ಚೆತ್ತ ಸುಪ್ರೀಂಕೋರ್ಟ್: ನ್ಯಾಯಾಂಗದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ನ್ಯಾಯಮೂರ್ತಿಗಳಿಂದ ಆಸ್ತಿ ವಿವರ ಬಹಿರಂಗ
Thursday, April 3, 2025
ನ್ಯಾ. ವರ್ಮಾ ಪ್ರಕರಣದ ಬಳಿಕ ಎಚ್ಚೆತ್ತ ಸುಪ್ರೀಂಕೋರ್ಟ್: ನ್ಯಾಯಾಂಗದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ನ್ಯಾಯಮೂರ್ತಿಗಳಿಂದ ಆಸ್ತಿ ವಿವರ ಬಹಿರಂಗ
ನ್ಯಾ. ವರ್ಮಾ ಪ್ರಕರಣದ ಬಳಿಕ ಎಚ್ಚೆತ್ತ ಸುಪ್ರೀಂಕೋರ್ಟ್ ನ್ಯಾಯಾಂಗದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ನ್ಯಾಯಮೂರ್ತಿಗಳಿಂದ ಆಸ್ತಿ ವಿವರ ಬಹಿರಂಗ ಪಡಿಸಲು ನಿರ್ಧರಿಸಿದ್ದಾರೆ.
ಈ ವಿವರಗಳನ್ನು ಬಹಿರಂಗವಾಗಿ ಹಂಚಿಕೊಳ್ಳಲಾಗುವುದು ಎಂದು 30 ನ್ಯಾಯಮೂರ್ತಿಗಳು ಹೇಳಿದ್ದು, ಇದೊಂದು ಐತಿಹಾಸಿಕ ಹೆಜ್ಜೆ ಎಂದು ಹೇಳಲಾಗಿದೆ.
ನ್ಯಾಯಮೂರ್ತಿಗಳ ಆಸ್ತಿ ವಿವರಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಸುಪ್ರೀಂ ಕೋರ್ಟ್ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.
ಆಸ್ತಿ ವಿವರ ಸ್ವಯಂಪ್ರೇರಿತವಾಗಿದ್ದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.