ಸಿವಿಲ್ ಪ್ರಕರಣದಲ್ಲಿ ಅನಗತ್ಯ ಕ್ರಿಮಿನಲ್ ಕೇಸ್: ಪೊಲೀಸರಿಗೆ ದಂಡ ವಿಧಿಸಿದ ಸುಪ್ರೀಂ ಕೋರ್ಟ್!
ಸಿವಿಲ್ ಪ್ರಕರಣದಲ್ಲಿ ಅನಗತ್ಯ ಕ್ರಿಮಿನಲ್ ಕೇಸ್: ಪೊಲೀಸರಿಗೆ ದಂಡ ವಿಧಿಸಿದ ಸುಪ್ರೀಂ ಕೋರ್ಟ್!
ಸಿವಿಲ್ ಪ್ರಕರಣದಲ್ಲಿ ಅನಗತ್ಯವಾಗಿ ಕ್ರಿಮಿನಲ್ ಕೇಸ್ ದಾಖಲಿಸಿದ ಪೊಲೀಸರಿಗೆ ಸುಪ್ರೀಂ ಕೋರ್ಟ್ 50 ಸಾವಿರ ರೂಪಾಯಿ ದಂಡ ವಿಧಿಸಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಪೊಲೀಸರಿಗೆ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದೆ.
ಸಿವಿಲ್ ಪ್ರಕರಣದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ತಪ್ಪು. ಪೊಲೀಸರ ಈ ನಡೆ ಕಾನೂನುಬಾಹಿರ ಮತ್ತು ಸ್ವೀಕಾರಾರ್ಹವಲ್ಲ ಎಂದು ನ್ಯಾಯಪೀಠ ಉತ್ತರ ಪ್ರದೇಶ ಪೊಲೀಸರ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.
ಸಿವಿಲ್ ಪ್ರಕರಣವನ್ನು ಕ್ರಿಮಿನಲ್ ಮೊಕದ್ದಮೆಯಾಗಿ ಪರಿವರ್ತಿಸುವ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಹಲವಾರು ಅರ್ಜಿಗಳು ಬರುತ್ತಿವೆ.
ಈ ಹಿಂದೆಯೂ ಉತ್ತರ ಪ್ರದೇಶ ಪೊಲೀಸರು ಇಂತಹ ಅಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅವರಿಗೆ ಕಠಿಣ ಶಬ್ಧಗಳ ಛೀಮಾರಿ ಅರ್ಥವಾದಂತಿಲ್ಲ ಎಂದು 50 ಸಾವಿರ ರೂಪಾಯಿ ದಂಡ ವಿಧಿಸಿತು.