-->
2 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ನಗದು ವಹಿವಾಟು: ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲು ಕೋರ್ಟ್‌ಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ

2 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ನಗದು ವಹಿವಾಟು: ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲು ಕೋರ್ಟ್‌ಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ

2 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ನಗದು ವಹಿವಾಟು: ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲು ಕೋರ್ಟ್‌ಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ





ಎರಡು ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ನಗದು ಪಾವತಿ ಒಳಗೊಂಡಿರುವ ಪ್ರಕರಣಗಳ ಬಗ್ಗೆ ನನ್ಯಾಯಾಲಯಗಳು ಸ್ಥಳೀಯ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿ ವಹಿವಾಟು ಪರಿಶೀಲಿಸಲು ತಿಳಿಸಬೇಕು ಎಂದು ಸುಪ್ರೀಂ ಕೋರ್ಟ್‌ ಮಹತ್ವದ ನಿರ್ದೇಶನ ನೀಡಿದೆ.


ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದೀವಾಲಾ ಮತ್ತು ಆರ್. ಮಹಾದೇವನ್ ಅವರಿದ್ದ ವಿಭಾಗೀಯ ನ್ಯಾಯಪೀಠ "ಕರೆಸ್ಪಾಂಡೆಸ್ RBANMS ಎಜುಕೇಶನಲ್ Vs ಬಿ. ಗುಣಶೇಖರ್ ಮತ್ತಿತರು ಪ್ರಕರಣದಲ್ಲಿ ಈ ನಿರ್ದೇಶನ ಜಾರಿಗೊಳಿಸಿದೆ.


ಆಸ್ತಿ ನೋಂದಣಿ ದಾಖಲೆಗಳಲ್ಲೂ ಎರಡು ಲಕ್ಷ ರೂ. ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ನಗದಾಗಿ ಪಾವತಿಸಿದರೆ, ಅಂತಹ ಸಂದರ್ಭದಲ್ಲಿ ಉಪ ನೋಂದಣಾಧಿಕಾರಿಗಳೂ ಆ ವ್ಯಾಪ್ತಿಯ ಆದಾಯ ತೆರಿಗೆ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು ಎಂದು ನ್ಯಾಯಪೀಠ ನಿರ್ದೇಶನದಲ್ಲಿ ತಿಳಿಸಿದೆ.


ಎರಡು ಲಕ್ಷಕ್ಕಿಂತ ಹೆಚ್ಚಿನ ವಹಿವಾಟನ್ನು ಡಿಜಿಟಲೀಕರಣಗೊಳಿಸುವ ಮೂಲಕ ಕಪ್ಪು ಹಣವನ್ನು ನಿಗ್ರಹಿಸಲು ತೆರಿಗೆ ಕಾಯ್ದೆಯ ಸೆಕ್ಷನ್ 269 ST ಜಾರಿಗೆ ತರಲಾಗಿದ್ದು, ಇದನ್ನು ಉಲ್ಲಂಘಿಸಿದ್ದರೆ ದಂಡ ವಿಧಿಸುವ ಅವಕಾಶ ಇದೆ.


ಒಂದು ವೇಳೆ, ಆದಾಯ ತೆರಿಗೆ ಪ್ರಾಧಿಕಾರವು ಯಾವುದೇ ಮೂಲದ ಮೂಲಕ ಅಥವಾ ವಿಚಾರಣೆಯ ಸಮಯದಲ್ಲಿ ಆಸ್ತಿ ವ್ಯವಹಾರದಲ್ಲಿ ಎರಡು ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ನಗದನ್ನು ಪಾವತಿಸಲಾಗಿದೆ ಎಂದು ಕಂಡುಕೊಂಡರೆ ಮತ್ತು ನೋಂದಣಿ ಅಧಿಕಾರಿ ಅದನ್ನು ವರದಿ ಮಾಡದಿದ್ದರೆ ಪ್ರಕರಣವನ್ನು ಸಂಬಂಧಿತ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿಗೆ ವರದಿ ಮಾಡಬೇಕು ಎಂದು ನ್ಯಾಯಾಲಯ ತಿಳಿಸಿದೆ.


ಆದೇಶದ ಪ್ರತಿಯನ್ನು ಎಲ್ಲ ಹೈಕೋರ್ಟ್‌ಗಳ ರಿಜಿಸ್ಟ್ರಿ ಮೂಲಕ ಜಿಲ್ಲಾ ನ್ಯಾಯಾಂಗಕ್ಕೆ ಕಳುಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ತನ್ನ ತೀರ್ಪಿನಲ್ಲಿ ಸೂಚಿಸಿದೆ.

Ads on article

Advertise in articles 1

advertising articles 2

Advertise under the article