-->
ಇ-ಸ್ವತ್ತು ನೀಡಿಕೆಯಲ್ಲಿ ಸಮಸ್ಯೆ: ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ ರಚನೆ

ಇ-ಸ್ವತ್ತು ನೀಡಿಕೆಯಲ್ಲಿ ಸಮಸ್ಯೆ: ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ ರಚನೆ

ಇ-ಸ್ವತ್ತು ನೀಡಿಕೆಯಲ್ಲಿ ಸಮಸ್ಯೆ: ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ ರಚನೆ





ಇ ಸ್ವತ್ತುಗಳಿಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಸರಕಾರ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರ ಅಧ್ಯಕ್ಷತೆಯಲ್ಲಿ 12 ಮಂದಿಯ ಕಾರ್ಯ ನಿರ್ವಹಣಾ ಸಮಿತಿ ರಚನೆಯಾಗಿದೆ.


ಇ ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳನ್ನು ಅಧ್ಯಯನ ಮಾಡಲು 12 ಅಧಿಕಾರಿಗಳನ್ನು ಒಳಗೊಂಡ ಕಾರ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ ಬಂದಿದೆ.


ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಗ್ರಾಮ ಪಂಚಾಯತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳು ನಿಯಮಗಳು 2006ರ ನಿಯಮ 28 ಮತ್ತು 30ಕ್ಕೆ ತಿದ್ದುಪಡಿ ತಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಕ್ರಮಬದ್ಧ ಆಸ್ತಿಗಳಿಗೆ ನಮೂನೆ 9 ಮತ್ತು 11 ಎ ಮತ್ತು ಕ್ರಮಬದ್ಧವಲ್ಲದ ಆಸ್ತಿಗಳಿಗೆ ನಮೂನೆ 11b ಅನ್ನು ಡಿಜಿಟಲ್ ಸಹಿ ಮೂಲಕ ವಿತರಿಸಲು ಅವಕಾಶ ಕಲ್ಪಿಸಲಾಗಿದೆ.


ಇ ಸ್ವತ್ತು ಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿಗಳಲ್ಲಿ ತಲೆದೋರುವ ಸಮಸ್ಯೆಗಳು ಹಾಗೂ ಪರಿಹಾರದ ಭಾಗವಾಗಿ ಈ ಸ್ವತ್ತು ಸುಧಾರಣೆಗೆ ಸಂಬಂಧಪಟ್ಟಂತೆ ಅಧ್ಯಯನ ಮಾಡಿ ವರದಿ ಸಲ್ಲಿಸುವ ಹೊಣೆಗಾರಿಕೆಯನ್ನು ಈ ಸಮಿತಿಗೆ ಒಪ್ಪಿಸಲಾಗಿದೆ.

Ads on article

Advertise in articles 1

advertising articles 2

Advertise under the article