
ನಿವೃತ್ತ ದಿನಗೂಲಿ ನೌಕರರಿಗೂ ವೇತನ ಹಿಂಬಾಕಿ ಸಹಿತ ಪಿಂಚಣಿ ನೀಡಲು ಹೈಕೋರ್ಟ್ ಆದೇಶ
ನಿವೃತ್ತ ದಿನಗೂಲಿ ನೌಕರರಿಗೂ ವೇತನ ಹಿಂಬಾಕಿ ಸಹಿತ ಪಿಂಚಣಿ ನೀಡಲು ಹೈಕೋರ್ಟ್ ಆದೇಶ
ಸತತವಾಗಿ ಮೂರು ದಶಕಗಳ ಕಾಲ ದಿನಗೂಲಿ ಆಧಾರದಲ್ಲಿ ಸೇವೆ ಸಲ್ಲಿಸಿದ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಕಲ್ಪಿಸುವಂತೆ ಕರ್ನಾಟಕ ಹೈಕೋರ್ಟ್ ಸರಕಾರಕ್ಕೆ ಆದೇಶ ನೀಡಿ ತೀರ್ಪು ನೀಡಿದೆ.
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಶ್ರೀ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ.
ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ದಿನಗೂಲಿ ಆಧಾರದಲ್ಲಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಕಾಳಪ್ಪ ಸೇರಿ 14 ನೌಕರರಿಗೆ ಪಿಂಚಣಿ ನೀಡದ ಸರಕಾರದ ಕ್ರಮಕ್ಕೆ ಹೈಕೋರ್ಟ್ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಪಿಂಚಣಿ ನೀಡಲು ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ ಹೊರಡಿಸಿದ್ದ ಆದೇಶವನ್ನು ರದ್ದು ಪಡಿಸಬೇಕು ಎಂದು ಕೋರಿ ರಾಜ್ಯ ಪಶು ಸಂಗೋಪನೆ ಇಲಾಖೆ ಆಯುಕ್ತರು ಹೈಕೋರ್ಟ್ ಬರೆ ಹೋಗಿದ್ದರು ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಸರಕಾರದ ಇತರೆ ನೌಕರರಂತೆ ಕಾಳಪ್ಪ ಮತ್ತಿತರ 13 ನೌಕರರು ಸತತ 30 ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿದ್ದಾರೆ ಪಿಂಚಣಿ ನಿರಾಕರಿಸುವುದು ತಾರೆ ತಮ್ಯವಾಗಿದೆ ಎಂದು ಹೈಕೋರ್ಟ್ ನ್ಯಾಯ ಪೀಠ ಅಭಿಪ್ರಾಯ ಪಟ್ಟಿದೆ.
ಸಂವಿಧಾನದ ಪರಿಚ್ಛೇದ 14 ಮತ್ತು 16 ಅನ್ವಯ ರಾಜ್ಯ ಸರ್ಕಾರವು ಯಾವುದೇ ವ್ಯಕ್ತಿ ಅಥವಾ ಸಮೂಹಕ್ಕೆ ತಾರತಮ್ಯ ಮಾಡುವಂತಿಲ್ಲ ಎಂದು ಅದು ಬುದ್ಧಿ ಮಾತು ಹೇಳಿದೆ.
ಸಾರ್ವಜನಿಕ ಉದ್ಯೋಗದಲ್ಲಿ ಸಮಾನತೆ ಹಾಗೂ ಸಮಾನ ಅವಕಾಶವನ್ನು ಕಾಯ್ದುಕೊಳ್ಳಬೇಕಾಗಿತ್ತದೆ ಸರಕಾರದ ಇಲಾಖೆಯು ಕಾಳಪ್ಪ ಮಚಿತರರಿಗೆ ಮೂರು ತಿಂಗಳಲ್ಲಿ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಮತ್ತು ಅವರಿಗೆ ಕೊಡಬೇಕಾದ ಹಿಂಬಾಕಿ ವೇತನವನ್ನು ಪಾವತಿಸಬೇಕು ಎಂದು ಸರಕಾರಕ್ಕೆ ನಿರ್ದೇಶನ ಹೊರಡಿಸಿ ಹೈಕೋರ್ಟ್ ತೀರ್ಪು ನೀಡಿದೆ.