-->
ಅಂಗಾಂಗ ದಾನ ಮಾಡುವ ನೌಕರರಿಗೆ 42 ದಿನದ ರಜೆ: ಕೇಂದ್ರ ಸರ್ಕಾರದ ಘೋಷಣೆ

ಅಂಗಾಂಗ ದಾನ ಮಾಡುವ ನೌಕರರಿಗೆ 42 ದಿನದ ರಜೆ: ಕೇಂದ್ರ ಸರ್ಕಾರದ ಘೋಷಣೆ

ಅಂಗಾಂಗ ದಾನ ಮಾಡುವ ನೌಕರರಿಗೆ 42 ದಿನದ ರಜೆ: ಕೇಂದ್ರ ಸರ್ಕಾರದ ಘೋಷಣೆ





ಅಂಗಾಂಗ ದಾನ ಮಾಡುವ ನೌಕರರಿಗೆ 42 ದಿನದ ರಜೆ ನೀಡುವುದಾಗಿ ಕೇಂದ್ರ ಸರ್ಕಾರದ ಘೋಷಣೆ ಮಾಡಿದೆ.


ಅಂಗಾಂಗ ದಾನ ಮಾಡಿದರೆ ಗರಿಷ್ಟ 42 ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನುಪಡೆಯಲು ಅವಕಾಶ ಇದೆ ಎಂದು ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.


ದಾನಿಗಳ ಅಂಗಾಂಗ ಪಡೆಯಲು ಯಾವುದೇ ರೀತಿಯ ಶಸ್ತ್ರಚಿಕಿತ್ಸೆ ಕೈಗೊಂಡಿದ್ದರೂ ಸರ್ಕಾರಿ ನೋಂದಾಯಿತ ವೈದ್ಯರ ಸಲಹೆಯಂತೆ ಈ ವಿಶೇಷ ಸಾಂದರ್ಭಿಕ ರಜೆಯ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.


2023ರಲ್ಲಿ ಈ ಬಗ್ಗೆ ಸಚಿವಾಲಯ ಆದೇಶ ಹೊರಡಿಸಿದೆ. ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ದಿನದಿಂದಲೇ ವಿಶೇಷ ಸಾಂದರ್ಭಿಕ ರಜೆಯನ್ನು ನೌಕರರು ಪಡೆದುಕೊಳ್ಳಬಹುದು. ವೈದ್ಯರ ಶಿಫಾರಸ್ಸಿನಿಂತೆ ಒಂದು ವಾರದ ಮೊದಲೇ ರಜೆ ತೆಗೆದುಕೊಳ್ಳಲು ಅವಕಾಶ ಇದೆ ಎಂಬುದನ್ನೂ ಸಚಿವರು ತಿಳಿಸಿದ್ದಾರೆ.


Ads on article

Advertise in articles 1

advertising articles 2

Advertise under the article